ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ವಿಚಾರದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೋವಿಡ್ ತಾಂತ್ರಿಕ ಸಮಿತಿಯ ಸಭೆ ನಡೆಸಲಾಗಿದೆ. ಕೋವಿಡ್ ಸೋಂಕು ನಿಯಂತ್ರಣಕ್ಕೆ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ದೇಶದಲ್ಲಿ ಒಟ್ಟು 257ಪ್ರಕರಣಗಳು ದೃಢಪಟ್ಟಿವೆ. ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೂ ಈ ಸಂಬಂಧ ನಿಕಟ ಸಂಪರ್ಕದಲ್ಲಿದ್ದೇವೆ. ಯಾರೂ ಕೂಡ ಕೋವಿಡ್ ಸೋಂಕಿನ ಕುರಿತು ಅನಗತ್ಯವಾಗಿ ಭಯಪಡಬಾರದು ಎಂದು ಹೇಳಿದ್ದಾರೆ.
ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದ್ರೆ ಸಾಕು ಸಂಪೂರ್ಣ ನಾರ್ಮಲ್ ಆಗುತ್ತೆ ಶುಗರ್ ಲೆವಲ್.!
ಕೋವಿಡ್ ಸೋಂಕಿನ ಲಕ್ಷಣ ಇರುವವರು ಗಾಬರಿ ಪಡಬಾರದು. ಇದು ಗಂಭೀರವಾದ ಸಮಸ್ಯೆಯೇನೂ ಅಲ್ಲ. ಉಸಿರಾಟದ ಸಮಸ್ಯೆ ಇರುವವರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಬೇಕು. ಶಿಷ್ಟಾಚಾರದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಜನಸಂದಣಿ ಹೆಚ್ಚಿರುವ ಕಡೆ ಬಾಣಂತಿಯರು ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇನ್ನೂ ಮಾಸ್ಕ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಸ್ಕ್ ಎಲ್ಲರಿಗೂ ಕಡ್ಡಾಯವಲ್ಲ ಎಂದು ಹೇಳಿದ್ದಾರೆ. ಬದಲಿಗೆ ಬಾಣಂತಿಯರು, ಗರ್ಭಿಣಿಯರು ಮಾಸ್ಕ್ ಧರಿಸಬೇಕು. ಮಕ್ಕಳು ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಕೋವಿಡ್ ಅವಧಿಯಲ್ಲಿ ಜಾರಿ ಮಾಡಲಾದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಹೇಳಿದ್ದಾರೆ.