ವಿಜಯಪುರ: ಇತ್ತೀಚೆಗೆ ಹೃದಯಾಘಾತಕ್ಕೆ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. 6 ವರ್ಷದಿಂದ ಹಿಡಿದು 60 ವರ್ಷದವರೆಗಿನ ಜನರು ಕುಸಿದು ಬಿದ್ದು ಇದ್ದಕ್ಕಿದ್ದಂತೆ ಪ್ರಾಣ ಬಿಡುತ್ತಿದ್ದಾರೆ. ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿರುವವರು, ಕ್ರಿಕೆಟ್ ಆಡುತ್ತಿರುವವರು ನಿಂತಲ್ಲೇ ಹೃದಯಾಘಾತಕ್ಕೆ ಜೀವ ಬಿಟ್ಟಿದ್ದಾರೆ.
ಇದೀಗ ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಡಾನ್ಸ್ ಮಾಡುವಾಗಲೇ ಯುವಕನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಮ್ಮದ್ ಪೈಗಂಬರ್ ಗಂಗನಹಳ್ಳಿ (28) ಮೃತ ದುರ್ಧೈವಿಯಾಗಿದ್ದು,
ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದ್ರೆ ಸಾಕು ಸಂಪೂರ್ಣ ನಾರ್ಮಲ್ ಆಗುತ್ತೆ ಶುಗರ್ ಲೆವಲ್.!
ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಏಕಾಏಕಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ