ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ಬೃಹತ್ ಅಂತರದಲ್ಲಿ ಗೆದ್ದು ಬೀಗಿದೆ.ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ ಹೈದರಾಬಾದ್ 20 ಓವರ್ಗಳಲ್ಲಿ ಬರೋಬ್ಬರಿ 278 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ನಿಯಮಿತ ಅಂತರದಲ್ಲಿ ವಿಕೆಟ್ ಕಳೆದುಕೊಂಡಿದ್ದರ ಪರಿಣಾಮವಾಗಿ ಸುಲಭವಾಗಿ ಸೊಲೊಪ್ಪಿಕೊಂಡಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಆರಂಭಿಕ ಜೋಡಿ ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ವೇಗದ ಆರಂಭ ನೀಡಿದರು. ಇಬ್ಬರೂ ಆಟಗಾರರು ಮೊದಲ ವಿಕೆಟ್ಗೆ 6.5 ಓವರ್ಗಳಲ್ಲಿ 92 ರನ್ ಸೇರಿಸಿದರು. ಅಭಿಷೇಕ್ ಶರ್ಮಾ 16 ಎಸೆತಗಳಲ್ಲಿ 32 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದರು. ಇದಾದ ನಂತರ ಬಂದ ಹೆನ್ರಿಕ್ ಕ್ಲಾಸೆನ್ ಕೂಡ ಕೇವಲ 39 ಎಸೆತಗಳಲ್ಲಿ 105 ರನ್ಗಳ ಅಜೇಯ ಇನ್ನಿಂಗ್ಸ್ ಆಡಿದರು
ಕೇವಲ 37 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದ ಕ್ಲಾಸೆನ್, ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಮೂರನೇ ವೇಗದ ಶತಕ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. 269.23 ಸ್ಟ್ರೈಕ್ ರೇಟ್ನಲ್ಲಿ ರನ್ ಕಲೆಹಾಕಿದ ಕ್ಲಾಸೆನ್ 7 ಬೌಂಡರಿ ಮತ್ತು 9 ಸಿಕ್ಸರ್ಗಳನ್ನು ಬಾರಿಸಿದರು. ಮತ್ತೊಂದೆಡೆ, ಟ್ರಾವಿಸ್ ಹೆಡ್ 40 ಎಸೆತಗಳಲ್ಲಿ 6 ಬೌಂಡರಿ ಮತ್ತು 6 ಸಿಕ್ಸರ್ಗಳ ಸಹಿತ 76 ರನ್ ಬಾರಿಸಿದರು. ಇಶಾನ್ ಕಿಶನ್ ಕೂಡ 20 ಎಸೆತಗಳಲ್ಲಿ 29 ರನ್ ಗಳಿಸಿದರೆ, ಅನಿಕೇತ್ ವರ್ಮಾ 6 ಎಸೆತಗಳಲ್ಲಿ 12 ರನ್ ಗಳಿಸಿ ಅಜೇಯರಾಗಿ ಉಳಿದರು. ಕೆಕೆಆರ್ ಪರ ಸುನಿಲ್ ನರೈನ್ 2 ವಿಕೆಟ್ ಮತ್ತು ವೈಭವ್ ಅರೋರಾ 1 ವಿಕೆಟ್ ಪಡೆದು ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರು.