ಬೆಳಗಾವಿ:-ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು. ಆದರೆ ಈ ಅನ್ನಭಾಗ್ಯ ಅಕ್ಕಿ ಬಡವರ ಬದಲಾಗಿ ಉಳ್ಳವರ ಪಾಲಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ.
ಚೆನ್ನೈ – ಬೆಂಗಳೂರು ಕಾರಿಡಾರ್ ರಸ್ತೆಯಲ್ಲಿ ಕಾರು ಅಪಘಾತ: ತಾಯಿ ಸಾವು, ಮಗ ಗಂಭೀರ!
ತಾಲ್ಲೂಕಿನ ಪೀರನವಾಡಿ ಗ್ರಾಮದ ಗೋದಾಮಿನಲ್ಲಿ 250ಕ್ಕೂ ಅಧಿಕ ಮೂಟೆಗಳಲ್ಲಿ ಅನ್ನಭಾಗ್ಯ ಯೋಜನೆ ಅಕ್ಕಿ ಸಂಗ್ರಹಿಸಿದ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ.
‘ನ್ಯಾಯಬೆಲೆ ಅಂಗಡಿಗಳಲ್ಲಿ ಕಡಿಮೆ ದರಕ್ಕೆ ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ಆರೋಪಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
‘ಗ್ರಾಮಸ್ಥರ ದೂರಿನ ಮೇರೆಗೆ ಆಹಾರ ನಿರೀಕ್ಷಕರು ಗೋದಾಮಿನ ಮೇಲೆ ದಾಳಿ ಮಾಡಿ, ಅಕ್ಕಿಯ ಜಪ್ತಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.