ಕೊಡಗು:– ಭಾರಿ ಮಳೆಗೆ ಕೊಡಗಿನ ಹಲವೆಡೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ನದಿ ತೀರದ ನಿವಾಸಿಗಳಿಗೆ ಪ್ರವಾಹದ ಆತಂಕ ಎದುರಾಗಿದೆ. ಹೀಗಾಗಿ, ಎರಡು ದಿನಗಳ ಕಾಲ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲ ಕಾಲೇಜುಗಳಿಗೆ ಮೇ 26 ಮತ್ತು 27 ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಹಾಗೇ, ಅಂಗನವಾಡಿಗಳಿಗೂ ಕೂಡ ಜಿಲ್ಲಾಡಳಿತ ರಜೆ ಘೋಷಿಸಿದೆ.
ಕೊಡಗು ಜಿಲ್ಲೆಯಾದ್ಯಂತ ವರುಣಾರ್ಭಟ ಮುಂದುವರೆದಿದೆ. ಭಾನುವಾರ ಬೆಳಗ್ಗೆಯಿಂದ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದೆ. ಭಾರಿ ಮಳೆಗೆ ಕೊಡಗಿನ ಹಲವೆಡೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ.