ಬಾಂಗ್ಲಾದೇಶ: ಯೂನಸ್ ಬಾಂಗ್ಲಾದೇಶವನ್ನು ಅಮೆರಿಕಕ್ಕೆ ಮಾರಾಟ ಮಾಡಲು ಹೊರಟಿದ್ದಾರೆ ಎಂದು ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ವಿರುದ್ಧ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಹೊಸ ಬಾಂಬ್ ಸಿಡಿಸಿದ್ದಾರೆ. ಫೇಸ್‌ಬುಕ್’ನಲ್ಲಿ ಪೋಸ್ಟ್
ಮಾಡಿರುವ ಅವರು, ಅಧಿಕಾರದ ಗದ್ದುಗೆ ಏರಲು ಯೂನಸ್ ನಿಷೇಧಿತ ಭಯೋತ್ಪಾದಕ ಸಂಘಟನೆಯ ಸಹಾಯವನ್ನು ಪಡೆದಿದ್ದಾರೆ. ನಾವು ಒಂದೇ ಒಂದು ಭಯೋತ್ಪಾದಕ ದಾಳಿಯ ನಂತರ ಕಠಿಣ ಕ್ರಮ ಕೈಗೊಂಡಿದ್ದೆವು. ಅನೇಕ ಜನರನ್ನು ಬಂಧಿಸಲಾಗಿತ್ತು. ಆದರೆ ಈಗ ಬಾಂಗ್ಲಾದೇಶದ ಜೈಲುಗಳು ಖಾಲಿಯಾಗಿವೆ. ಯೂಬಸ್ ಎಲ್ಲರನ್ನೂ ಬಿಡುಗಡೆ ಮಾಡಿದ್ದಾರೆ, ಈಗ ಆ ಭಯೋತ್ಪಾದಕರು ಬಾಂಗ್ಲಾದೇಶದಲ್ಲಿ ಆಳ್ವಿಕೆ ನಡೆಸುತ್ತಿದ್ದಾರೆ ಎಂದು ದೂರಿದ್ದಾರೆ.
ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!
ಇದೇ ವೇಳೆ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಇಡೀ ದೇಶ ತಮ್ಮ ತಂದೆಯವರೊಂದಿಗೆ ಶಸ್ತ್ರಾಸ್ತ್ರ ಹಿಡಿದು ಹೋರಾಟ ನಡೆಸಿದ ಕ್ಷಣಗಳನ್ನು ಹಸೀನಾ ನೆನಪಿಸಿಕೊಂಡರು. ಆ ದೇಶದ ಒಂದಿಂಚು ಮಣ್ಣನ್ನೂ ಬಿಟ್ಟುಕೊಡುವ ಉದ್ದೇಶ ಯಾರೊಬ್ಬರಿಗೂ ಇರಲಿಲ್ಲ. ಆದರೆ ಇಂದಿನ ಸ್ಥಿತಿ ನಿಜಕ್ಕೂ ದುರದೃಷ್ಟಕರ, ದೇಶವನ್ನೇ ಮಾರಾಟ ಮಾಡುವ ವ್ಯಕ್ತಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.
ಅಂದು ನಮ್ಮ ಸರ್ಕಾರ ಬಾಂಗ್ಲಾದೇಶದ ಜನರ ರಕ್ಷಣೆಗೆ ನಿಂತಿತ್ತು. ಒಂದೇ ಒಂದು ಉಗ್ರರ ದಾಳಿಯ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೆವು. ಹಲವರನ್ನು ಬಂಧಿಸಿ ಜೈಲಿಗಟ್ಟಿದ್ದೆವು. ಆದರಿಂದು ದೇಶದ ಜೈಲುಗಳು ಖಾಲಿಯಾಗಿವೆ. ಬಂಧನದಲ್ಲಿದ್ದ ಉಗ್ರರನ್ನ ಬಿಡುಗಡೆ ಮಾಡಲಾಗಿದೆ. ಹಾಗಾಗಿ ಬಾಂಗ್ಲಾ ಸರ್ಕಾರದಲ್ಲಿ ಈಗ ಉಗ್ರರ ಆಳ್ವಿಕೆ ಶುರುವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.