ಮಾವಿನ ಹಣ್ಣು ಅಂದ್ರೆ ಯಾರಿಗೆ ತಾನೇ ಇಷ್ಡವಾಗುವುದಿಲ್ಲ ಹೇಳಿ. ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದೇ ಹೇಳಲಾಗುತ್ತದೆ. ಪ್ರಪಂಚದಾದ್ಯಂತ ಜನ ಮಾವಿನ ಹಣ್ಣನ್ನು ಇಷ್ಟಪಡುತ್ತಾರೆ. ರುಚಿಯಷ್ಟೇ ಅಲ್ಲ ಮಾವಿನ ಹಣ್ಣಿನಲ್ಲಿ ನಮ್ಮ ದೇಹಕ್ಕೆ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳಿವೆ.
ಕೋವಿಡ್ ಅಬ್ಬರಕ್ಕೆ ಬ್ರೇಕ್ ಹಾಕಲು ಸಿದ್ಧತೆ: ಕೆಎಂಸಿ ಆರ್ ಐ ಗೆ 10 ಸಾವಿರ ಕಿಟ್ ಹಂಚಿಕೆ..!
ಮಾವಿನಹಣ್ಣಿನ ರುಚಿಯನ್ನು ನೀವು ಹಲವು ರೀತಿಯಲ್ಲಿ ಆನಂದಿಸಬಹುದು. ಇದನ್ನು ಹಾಗೆಯೇ ಕಚ್ಚಿಕೊಂಡು ತಿನ್ನಬಹುದು ಅಥವಾ ಜ್ಯೂಸ್ ಮಾಡಿ ಸಹ ಕುಡಿಯಬಹುದು. ಇಲ್ಲದಿದ್ದರೆ ಸಿಹಿತಿಂಡಿ ಮಾಡಿ ಕೂಡ ಸೇವಿಸಬಹುದು. ಆದರೆ ಮಾವಿನ ಹಣ್ಣನ್ನು ತಿಂದ ತಕ್ಷಣ ಕೆಲವು ಆಹಾರಗಳನ್ನು ಸೇವಿಸಬಾರದು ಎಂಬ ವಿಚಾರ ನಿಮಗೆ ತಿಳಿದಿದ್ಯಾ? ಹಾಗೆ ತಿಂದ ತಕ್ಷಣ ನಮಗೆ ಜೀರ್ಣಕ್ರಿಯೆ ಸಮಸ್ಯೆ ಉಂಟಾಗುತ್ತದೆ ಅಥವಾ ಮಾವಿನ ಹಣ್ಣಿನ ವಿಶಿಷ್ಟ ರುಚಿಯನ್ನು ಸಂಪೂರ್ಣವಾಗಿ ಅನುಭವಿಸಲು ಸಾಧ್ಯವಾಗುವುದಿಲ್ಲ.
ಮಾವು ರುಚಿಕರವಾಗಿರುವುದರ ಜೊತೆಗೆ ಪೋಷಕಾಂಶಗಳಿಂದ ಕೂಡ ಸಮೃದ್ಧವಾಗಿದೆ. ಆದ್ರೆ ಈ ಮಾವಿನ ಹಣ್ಣನ್ನು ತಿಂದ ಮೇಲೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡಲೇಬೇಡಿ.
ಸಾಮಾನ್ಯವಾಗಿ ಸಾಕಷ್ಟು ಮಂದಿ ಹಣ್ಣು ತಿಂದ ಮೇಲೆ ನೀರು ಕುಡಿಯುತ್ತಾರೆ. ಆದ್ರೆ ಮಾವಿನ ಹಣ್ಣು ತಿಂದ ನಂತರ ತಂಪು ಪಾನೀಯಗಳನ್ನು ಕುಡಿಯಬಾರದಂತೆ.. ಏಕೆಂದರೆ ಮಾವಿನ ಹಣ್ಣಿನಲ್ಲಿರುವ ಸಿಟ್ರಿಕ್ ಆಸಿಡ್ ಮತ್ತು ತಂಪು ಪಾನೀಯದಲ್ಲಿರುವ ಕಾರ್ಬೊನಿಕ್ ಆಮ್ಲ ಸೇರಿ ದೇಹದಲ್ಲಿ ವಿಷವನ್ನು ಸೃಷ್ಟಿಸುತ್ತದೆ. ಇದರಿಂದ ಪ್ರಾಣಕ್ಕೆ ಕುತ್ತು ಬರಬಹುದು ಎಂದು ಹೇಳಲಾಗಿದೆ. ಆದ್ರೆ ಮಾವಿನ ಹಣ್ಣನ್ನು ತಿಂದ ಬಳಿಕ ತಂಪು ಪಾನೀಯಗಳನ್ನು ಕುಡಿದರೇ ಸಾವು ಸಂಭವಿಸುತ್ತದೆ ಎಂಬುವುದಕ್ಕೆ ನಿಖರ ಮಾಹಿತಿ ಇಲ್ಲ
ಇನ್ನೂ, ಮಾವಿನ ಹಣ್ಣನ್ನು ತಿನ್ನುವುದರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನ ಆಗುತ್ತದೆ ಎಂದು ತಿಳಿದುಕೊಳ್ಳಿ. ಮಾವಿನ ಹಣ್ಣಿನಲ್ಲಿ ವಿಟಮಿನ್ ಎ, ಸಿ ಮತ್ತು ಕೆ ಜೊತೆಗೆ ಪೊಟ್ಯಾಸಿಯಮ್, ಬೀಟಾ-ಕ್ಯಾರೋಟಿನ್, ಫೋಲೇಟ್ ಮತ್ತು ಮೆಗ್ನೀಸಿಯಮ್, ಕ್ಯಾಲ್ಸಿಯಂ, ಕಬ್ಬಿಣ, ಸೆಲೆನಿಯಮ್, ರಂಜಕ ಮತ್ತು ಮ್ಯಾಂಗನೀಸ್ ಸೇರಿದಂತೆ ಹಲವಾರು ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿದೆ. ಮಾವಿನ ಹಣ್ಣಿನಲ್ಲಿ ವಿಟಮಿನ್ ಎ, ಸಿ ಮತ್ತು ಕೆ ಜೊತೆಗೆ ಪೊಟ್ಯಾಸಿಯಮ್, ಬೀಟಾ-ಕ್ಯಾರೋಟಿನ್, ಫೋಲೇಟ್ ಮತ್ತು ಮೆಗ್ನೀಸಿಯಮ್, ಕ್ಯಾಲ್ಸಿಯಂ, ಕಬ್ಬಿಣ, ಸೆಲೆನಿಯಮ್, ರಂಜಕ ಮತ್ತು ಮ್ಯಾಂಗನೀಸ್ ಸೇರಿದಂತೆ ಹಲವಾರು ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಅಷ್ಟೇ ಅಲ್ಲದೇ ಇದು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.