ಬೆಂಗಳೂರು: 5 ವರ್ಷಗಳ ಹಿಂದೆ ಪ್ರಪಂಚದಾದ್ಯಂತ ಲಕ್ಷಾಂತರ ಜೀವಗಳನ್ನ ಬಲಿ ಪಡೆದಿದ್ದ ರಣರಕ್ಕಸ ವೈರಸ್ ಈಗ ಮರುಜನ್ಮ ಪಡೆದಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಿಂದ ಕರ್ನಾಟಕ, ಕೇರಳದವರೆಗೂ ಮತ್ತೆ ಕೊರೊನಾ ತನ್ನ ರಣಕೇಕೆಯನ್ನ ಶುರು ಮಾಡಿದೆ. ಇನ್ನು ವಿಚಾರಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೇ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ಕೊಟ್ಟರೆ ಅದನ್ನ ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ ಕೊಡುವ ಮಾರ್ಗಸೂಚಿಯನ್ನೂ ನಾವು ಜಾರಿ ಮಾಡುತ್ತೇವೆ. ಇಲ್ಲಿವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ ಎಂದಿದ್ದಾರೆ.