ಕಲಬುರಗಿ:ನಾನು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ. ಅದು ಬಾಯಿ ತಪ್ಪಿನಿಂದ ಬಂದ ಹೇಳಿಕೆ ಎಂದು ಕರ್ನಾಟಕ ಐಎಎಸ್ ಸಂಘ ಖಂಡನೆ, ಅಟ್ರಾಸಿಟಿ ಕೇಸ್ ದಾಖಲಾದ ಬೆನ್ನಲ್ಲೇ ರವಿ ಕುಮಾರ್ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಮೇ 24ರಂದು ಬಿಜೆಪಿ ಪ್ರತಿಭಟನಾಯಲ್ಲಿ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರು ಅಬ್ಬರದ ಭಾಷಣ ಮಾಡಿದ್ದರು.
ಈ ಸಂಬಂಧ ಖಾಸಗಿ ವ್ಯಕ್ತಿ ನೀಡಿದ ದೂರಿನ ಅನ್ವಯ ನ್.ರವಿಕುಮಾರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಸರ್ಕಾರಿ ಅಧಿಕಾರಿಗಳ ನಿಂದನೆ, ಎಸ್ಸಿ ಸಮುದಾಯ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ರವಿಕುಮಾರ್,
ನನ್ನ ಅಜಾಗರೂಕ ಟೀಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾನು ಆ ಹೇಳಿಕೆಯನ್ನು ಕೂಡಲೇ ಹಿಂದಕ್ಕೆ ಪಡೆದಿದ್ದೇನೆ.ಜಿಲ್ಲಾಧಿಕಾರಿ ಅತ್ಯಂತ ಗೌರವಪಾತ್ರರು. ಅದು ನಾನು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ. ಅದು ಬಾಯಿ ತಪ್ಪಿನಿಂದ ಬಂದ ಹೇಳಿಕೆ. ಅಂದು ನಾನು ಆಡಿದ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.