ಬೆಂಗಳೂರು:- ನಗರದಲ್ಲಿ ರೋಡ್ರೇಜ್ ಪ್ರಕರಣ ದಿನೇ-ದಿನೇ ನಿಲ್ಲುತ್ತಿಲ್ಲ. ಇತ್ತೀಚಿನ ವರ್ಷಗಳಲ್ಲಿ ಬೀದಿ ಕಾಳಗ ಗಲಾಟೆ ಮಿತಿ ಮೀರುತ್ತಿದೆ. ಮಾತಿನ ಚಕಮಕಿಯಲ್ಲಿ ಕೊನೆಯಾಗುತ್ತಿದ್ದ ಸಂಘರ್ಷಗಳು ಇಂದು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿವೆ. ಸಾಮಾಜಿಕ ಜಾಲತಾಣಗಳು ಮುನ್ನೆಲೆಗೆ ಬಂದ ಬಳಿಕವಂತೂ ವರದಿಯಾಗುವ ಪ್ರಕರಣಗಳ ಸಂಖ್ಯೆ ಹೆಚ್ಚಾಗತೊಡಗಿವೆ. ಇದಕ್ಕೆ ಪೂರಕವೆಂಬಂತೆ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷ ಎಸ್. ಉಮೇಶ್ ಎಂಬುವರ ಮೇಲೆ ನಡೆದ ಬರ್ಬರವಾಗಿ ಹಲ್ಲೆ ಮಾಡಿರುವುದುನ್ನು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ.
ಹೆಬ್ಬಾರ್, ಸೋಮಶೇಖರ ಉಚ್ಚಾಟನೆಗೆ ಶಿವಕುಮಾರ್ ಕಾರಣ- ಶಾಸಕ ಮಹೇಶ ಟೆಂಗಿನಕಾಯಿ!
ಎಸ್. ಉಮೇಶ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಈವರೆಗೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎನ್ ಶಿವಕುಮಾರ್ ಆರೋಪಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿ ಪ್ರಕರಣದ ಓರ್ವ ಆರೋಪಿ ಸ್ಥಳದಲ್ಲಿದ್ದನು. ಎಸ್. ಉಮೇಶ್ ಅವರು ಆರೋಪಿಯನ್ನು ಗುರುತಿಸಿದರೂ, ಪೊಲೀಸರು ಆತನನ್ನು ಬಂಧಿಸಲಿಲ್ಲ ಎಂದು ಎನ್ ಶಿವಕುಮಾರ್ ಹೇಳಿದ್ದಾರೆ.
ಎಸ್. ಉಮೇಶ್ ಅವರು 40 ವರ್ಷಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ. ಈ ಘಟನೆಯು ಸಾಮಾನ್ಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.
ಪೊಲೀಸ್ ಆಯುಕ್ತರು ತಕ್ಷಣ ಮಧ್ಯಪ್ರವೇಶಿಸಿ ಆರೋಪಿಗಳನ್ನು ಕೂಡಲೆ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.