ಚಾಮರಾಜನಗರ:- ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜಲು ಇಳಿದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು. ಆದರೆ ಒಬ್ಬ ವಿದ್ಯಾರ್ಥಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿನಿಮಾದಲ್ಲಿ ಅಮೋಘ ಸಾಧನೆ: ರಾಷ್ಟ್ರಪತಿಯಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್!
ಬೆಂಗಳೂರು ಮೂಲದ ದಯಾನಂದ ಸಾಗರ್ ಮೆಡಿಕಲ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳು ಮಂಗಳವಾರ ಪ್ರವಾಸಸ ನಿಮಿತ್ತ ಶಿವನಸಮುದ್ರಕ್ಕೆ ಆಗಮಿಸಿದ್ದರು. ಈ ಸಂದರ್ಭ ನಾಲ್ವರು ವಿದ್ಯಾರ್ಥಿಗಳು ನದಿಗೆ ಈಜಲು ಇಳಿದಾಗ ಈಜಲು ಸಾಧ್ಯವಾಗದೆ ಪರದಾಡುತ್ತಿರುವ ಪರಿಸ್ಥತಿಯ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ತಕ್ಷಣ ಕೊಳ್ಳೇಗಾಲ ಅಗ್ನಿಶಾಮಕ ಠಾಣಾಧಿಕಾರಿ ಅರುಣ್ ಕುಮಾರ್ ಅವರ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿ, ಪ್ರಫುಲ್ಲ, ತುಷಾರಾ ಮತ್ತು ಪ್ರಮೋದ್ ಎಂಬ ಮೂವರನ್ನು ರಕ್ಷಣೆ ಮಾಡಿದ್ದು. ಆದರೆ ನಂದಕುಮಾರ್ ಎಂಬ ವಿದ್ಯಾರ್ಥಿ ಇನ್ನೂ ನಾಪತ್ತೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ.