ಹೊಂಬಾಳೆ ಫಿಲಂಸ್ ಭಾರತೀಯ ಚಿತ್ರರಂಗದ ಪ್ರಮುಖ ನಟ ಹೃತಿಕ್ ರೋಷನ್ ಅವರೊಂದಿಗೆ ಹೊಸ ಚಿತ್ರವೊಂದನ್ನು ಘೋಷಿಸಿದೆ. ಈ ಮೂಲಕ, ಕನ್ನಡ ನೆಲದಿಂದ ಜಾಗತಿಕ ರಂಗಕ್ಕೆ ತಮ್ಮ ಪಯಣವನ್ನು ಇನ್ನಷ್ಟು ಗಟ್ಟಿಗೊಳಿಸಿದೆ.
ರಾಜಕುಮಾರ, ಯುವರತ್ನ, ಕೆಜಿಎಫ್, ಕಾಂತಾರ ಮತ್ತು ಬಘೀರಾದಂತಹ ಯಶಸ್ವಿ ಚಿತ್ರಗಳ ಮೂಲಕ ಕರ್ನಾಟಕದಲ್ಲಿ ಭದ್ರ ನೆಲೆ ಕಂಡುಕೊಂಡಿರುವ ಹೊಂಬಾಳೆ ಫಿಲಂಸ್, ಯಾವಾಗಲೂ ಮೌಲ್ಯಯುತ ಕಥೆಗಳನ್ನು ಹೇಳುವಲ್ಲಿ ಮತ್ತು ಉತ್ತಮ ಮನರಂಜನೆ ನೀಡುವಲ್ಲಿ ಬದ್ಧವಾಗಿದೆ.
ಕರ್ನಾಟಕದ ಮಣ್ಣಿಂದ ಜಾಗತಿಕ ರಂಗಡೆದೆಗೆ ಸಾಗುವ ನಮ್ಮ ಪಯಣದಲ್ಲಿ ಇದೊಂದು ಮಹತ್ವದ ಹೆಜ್ಜೆ…✨#HRITHIKxHOMBALE pic.twitter.com/6YTZgfyFmx
— Hombale Films (@hombalefilms) May 28, 2025
ಈಗ, ಹೃತಿಕ್ ರೋಷನ್ ಅವರಂತಹ ಪ್ರತಿಭಾವಂತ ನಟರೊಂದಿಗೆ ಕೈಜೋಡಿಸಿ, ದೇಶದ ಗಡಿಗಳನ್ನು ಮೀರಿ, ಪ್ರಪಂಚದಾದ್ಯಂತ ಕಥೆಗಳನ್ನು ತಲುಪಿಸುವ ಕನಸು ಕಂಡಿದೆ. ಚಿತ್ರದ ನಿರ್ದೇಶಕರ ಕುರಿತಾದ ಹೆಚ್ಚಿನ ಮಾಹಿತಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.
They call him the Greek God. He's ruled hearts, shattered limits and we see the phenomenon he truly is!
We are proud to welcome @iHrithik to the @hombalefilms family for a collaboration, years in the making. A tale of grit, grandeur and glory is set to unfold, where intensity… pic.twitter.com/ZU2FHKjKdm— Hombale Films (@hombalefilms) May 28, 2025