Close Menu
Ain Live News
    Facebook X (Twitter) Instagram YouTube
    Wednesday, June 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮಕ್ಕಳಿಗೆ ಗುಡ್ ನ್ಯೂಸ್: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಆರೂ ದಿನವೂ ಮೊಟ್ಟೆ ವಿತರಣೆ: ಸಿದ್ದರಾಮಯ್ಯ!

    By AIN AuthorMay 31, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಆರೂ ದಿನವೂ ಮೊಟ್ಟೆ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

    ಹಾರ್ದಿಕ್- ಗಿಲ್ ನಡುವಿನ ಸ್ನೇಹದಲ್ಲಿ ಬಿರುಕು!? GT ಕ್ಯಾಪ್ಟನ್ ಹೇಳಿದ್ದೇನು?

    ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಪ್ರಗತಿ ಪರಿಶೀಲನೆಯ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಸಿಎಂ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದ ಆರೂ ದಿನವೂ ಮೊಟ್ಟೆ‌ ನೀಡುತ್ತೇವೆ. ಮಕ್ಕಳಿಗೆ ಸಮವಸ್ತ್ರ, ಪುಸ್ತಕ ಎಲ್ಲವನ್ನೂ ಕೊಡುತ್ತಿದ್ದೇವೆ. 1 ರಿಂದ 1.50 ಲಕ್ಷ ವಿದ್ಯಾರ್ಥಿಗಳು ಸಂಖ್ಯೆ ಕಡಿಮೆ ಆಗುತ್ತಿದೆ. 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಸೂಚನೆ ನೀಡಿದ್ದೇನೆ. ಮಂಗಳೂರು, ಉಡುಪಿ, ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್​ಎಸ್​ಎಲ್​ಸಿ, ಪಿಯುಸಿ ಫಲಿತಾಂಶ ಕಡಿಮೆ ಬಂದಿದೆ. ಹೀಗಾಗಿ, 5 ಸಾವಿರ ಕೋಟಿ‌ ರೂಪಾಯಿ ಕೊಡುತ್ತಿದ್ದೇನೆ ಎಂದು ಹೇಳಿದರು.

    ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು ಜನಸ್ಪಂದನಾ ಕಾರ್ಯಕ್ರಮ ಮಾಡಬೇಕು. ಶಾಲೆ, ಆಸ್ಪತ್ರೆ, ಅಂಗನವಾಡಿ, ವಸತಿ‌ಶಾಲೆ, ರುದ್ರ ಭೂಮಿಗೆ ಸರ್ಕಾರಿ ಜಮೀನು, ನಿವೇಶ ಕೊಡಬೇಕು. ಸರ್ಕಾರಿ ಜಮೀನು ಇಲ್ಲದಿದ್ದರೇ, ಖರೀದಿ ಮಾಡಿ ಕೊಡಬೇಕು. ಇದನ್ನು ಕಡ್ಡಾಯಗೊಳಿಸಲು ಸೂಚಿಸಿದ್ದೇನೆ. ಎಸ್​​ಸಿ, ಎಸ್​ಟಿಗಳಿಗೆ ಸಿಂಧುತ್ವ ಪ್ರಮಾಣ ಪತ್ರ ಒಂದು ತಿಂಗಳೊಳಗೆ ನೀಡಬೇಕು ಎಂದು ಹೇಳಿದ್ದೇನೆ ಎಂದು ಹೇಳಿದರು.

    ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ? ತಕ್ಷಣ ದೂರು ದಾಖಲಿಸಿ ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಅಂತ ಸೂಚಿಸಿದ್ದೇನೆ ಎಂದು ತಿಳಿಸಿದರು

    ನಾವು ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಈಗಾಗಲೇ ಘೋಷಿಸಿದ್ದೇವೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರೆಸಬೇಕು. ಮಾದಕ ವಸ್ತು ಮಾರಾಟ ಮಾಡುವವರ ಅಂಗಡಿ ಮತ್ತಿತರ ಕೇಂದ್ರಗಳ ಪರವಾನಗಿ ರದ್ದುಗೊಳಿಸುವ ಸ೦ಬ೦ಧ ಕಾನೂನು ತಿದ್ದುಪಡಿ ತರುತ್ತೇವೆ ಎಂದು ಹೇಳಿದರು.

    Demo
    Share. Facebook Twitter LinkedIn Email WhatsApp

    Related Posts

    IPL 2025: ಈ ಸಲ ಕಪ್ ನಮ್ದು.. ಚೊಚ್ಚಲ IPL ಟ್ರೋಫಿ ಗೆದ್ದು ಬೀಗಿದ ಆರ್ ಸಿಬಿ!

    June 3, 2025

    RCB Vs PBKS: ಕಾರಲ್ಲೇ ಫೈನಲ್ ಮ್ಯಾಚ್ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ!

    June 3, 2025

    ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ: ವಿಜಯೇಂದ್ರ!

    June 3, 2025

    RCB Vs PBKS ಫೈನಲ್ ಫೈಟ್: ಬೆಂಗಳೂರು ಗೆಲುವಿಗಾಗಿ ರಕ್ತದಾನ ಮಾಡಿದ ಕಿರುತೆರೆ ನಟಿ ರಜಿನಿ!

    June 3, 2025

    ಫೈನಲ್ ಫೈಟ್: RCBಗೆ ಶುಭ ಕೋರಿದ ಬ್ರಿಟನ್ ಮಾಜಿ ಪ್ರಧಾನಿ!

    June 3, 2025

    IPL 2025: ಈ ಸಲ ಕಪ್ ನಮ್ದೇ: RCB ತಂಡಕ್ಕೆ ಶುಭ ಕೋರಿದ ಪರಿಷತ್ ಶಾಸಕ TA ಶರವಣ!

    June 3, 2025

    ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ ಕುರಿತು ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುವೆ: DCM ಡಿಕೆ ಶಿವಕುಮಾರ್!

    June 3, 2025

    ರೈತರ ಹಕ್ಕನ್ನು ಮೊಟಕುಗೊಳಿಸುವ ಕೆಲಸವು ರಾಜ್ಯ ಸರ್ಕಾರಕ್ಕೆ ಶೋಭೆ ತರುವುದಿಲ್ಲ: ಬಿ.ವೈ.ವಿಜಯೇಂದ್ರ

    June 3, 2025

    Gruha Lakshmi Scheme: ಗೃಹ ಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

    June 3, 2025

    ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಕಮಲ್ ಹಾಸನ್ ವರ್ತನೆ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ

    June 3, 2025

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ಹಾಗೂ ಕೇಂದ್ರ ಜಲಶಕ್ತಿ ಸಚಿವರ ಭೇಟಿಗೆ ಸಮಯ ಕೇಳುತ್ತೇವೆ: ಡಿ.ಕೆ. ಶಿವಕುಮಾರ್

    June 3, 2025

    RCB vs PBKS: ಆರ್ ​ಸಿಬಿ ಗೆಲ್ಲುತ್ತೆ ಎಂದು ಈಗಲೇ ಹೇಳಬೇಡಿ ಎಂದು ಅನಿಲ್ ಕುಂಬ್ಳೆ ಹೇಳಿದ್ಯಾಕೆ..?

    June 3, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.