ಚಿಕ್ಕಬಳ್ಳಾಪುರ:- ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಆರು ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಘಟನೆ ಬೆನ್ನಲ್ಲೇ ಸಂತ್ರಸ್ತೆ ತಾಯಿ ದೂರು ನೀಡಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
SSLC ಫೇಲ್ ಆಯ್ತು ಅಂತ ಮನೆಯಲ್ಲೇ ಕೂತಿದ್ದೀರಾ!? ಇಂದೇ ಶಾಲೆಗೆ ಹೋಗಿ.. ರೂಲ್ಸ್ ಹೀಗಿದೆ!
ದೂರಿನ ಅನ್ವಯ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಮಹಪ್ಯೂಸ್ ಬಂಧಿತ ಆರೋಪಿ. ಆರೋಪಿಯು ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯ ತಂದೆಯಾಗಿದ್ದಾನೆ.
ಆರೋಪಿಯ ಮಗ ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದುದರಿಂದ ಮೌಲ್ವಿಯ ಆಶ್ರಯಕ್ಕೆ ಮಸಿದಿಯ ಕೊಠಡಿಯನ್ನು ಜಮಾತ್ ನೀಡಿತ್ತು. ಅದೇ ಕೊಠಡಿಯನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ. ಚಾಕೊಲೇಟ್ ಕೊಡಿಸುವ ಆಮಿಷವೊಡ್ಡಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮಸೀದಿಯ ಮೌಲ್ವಿ ಸುಹೇಬ್ನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮೌಲ್ವಿಯ ಆಶ್ರಯಕ್ಕೆಂದು ಪಡೆದ ಕೊಠಡಿಯನ್ನು ತಂದೆಗೆ ಯಾಕೆ ನೀಡಿದ್ದು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೊಂದೆಡೆ, ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ ಎನ್ನಲಾಗಿದೆ.