ಬೆಂಗಳೂರು: ಆರ್ಸಿಬಿ ತಂಡವು ಅಹಮದಾಬಾದ್ನಲ್ಲಿ ನಡೆದ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿ ಚೊಚ್ಚಲ ಐಪಿಎಲ್ ಕಪ್ ಗೆದ್ದಿದೆ. ಈ ಗೆಲುವಿನ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಆರ್ಸಿಬಿ ತಂಡಕ್ಕೆ ಶುಭಾಶಯ ಕೋರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಆರ್ಸಿಬಿ ತಂಡವನ್ನು ನಾವು ಗೌರವಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಟ್ರಾಫಿಕ್ಗೂ ಸಮಸ್ಯೆ ಆಗಬಾರದು, ಸಾಕಷ್ಟು ಯುವಕರು ಭಾಗವಹಿಸುತ್ತಾರೆ ಎಂದರು.
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ಅವರು ಶೆಡ್ಯೂಲ್ ಹಾಕಿಕೊಳ್ಳುತ್ತಾರೆ. ಆದರೆ ಕಂಟ್ರೋಲ್ ಮಾಡೋದು ನಾವು. ಗೃಹ ಸಚಿವರು, ಪೊಲೀಸ್ ಕಮೀಷನರ್ ಎಲ್ಲಾ ಕೂತು ಮಾತನಾಡಿ ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ನಾನು ಕೂಡ ಸಂಪೂರ್ಣ ಮ್ಯಾಚ್ ನೋಡಿದ್ದೇನೆ. ಆರ್ಸಿಬಿ ಟೀಂ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರಿಗೆ ಸನ್ಮಾನ ಮಾಡುವ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ತಿಳಿಸಿದರು.