ಬೆಳಗಾವಿ: ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಓರ್ವ ಮಹಿಳೆ ಸಾವನ್ನಪ್ಪಿದ್ದು, 15ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆನಚಿನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕೊಳವಿ ಗ್ರಾಮದ ಯಲ್ಲವ್ವ ಬೀರನಗಡ್ಡಿ(70) ಮೃತ ಮಹಿಳೆ. ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಗೋಕಾಕ್ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೈಲಹೊಂಗಲ ಗೋಕಾಕ್ ಮಾರ್ಗದಲ್ಲಿ ಬಸ್ ಸಂಚರಿಸುತಿತ್ತು.
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ಡಿಕ್ಕಿ ರಭಸಕ್ಕೆ ಪಲ್ಟಿಯಾಗಿದ್ದ ಬಸ್ ಅಡಿ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರನ್ನು ಸ್ಥಳೀಯರು ಕಿಟಕಿ ಗಾಜುಗಳನ್ನ ಒಡೆದು ರಕ್ಷಿಸಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.