ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿಧಾನಸೌಧ ಮುಂದೆ RCB ವಿಜಯೋತ್ಸವಕ್ಕೆ ಅನುಮತಿ ನೀಡಿರುವುದರ ಬಗ್ಗೆ ನಾನಾ ಗೊಂದಲಗಳು ಏರ್ಪಟ್ಟಿದ್ದು,
ಇದೀಗ ಈ ಪ್ರಕರಣ ಸಂಬಂಧಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕೆಎಸ್ಸಿಎ ಕಾರ್ಯದರ್ಶಿ ಎ. ಶಂಕರ್, ಖಜಾಂಚಿ ಜೈರಾಮ್ ಶುಕ್ರವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್ ಅವರೇ ಪ್ರಕಟಣೆ ಹೊರಡಿಸಿದ್ದಾರೆ.
ನಿತ್ಯ ನೀವು ಟಾಯ್ಲೆಟ್ ಗೆ ಹೋದ ಬಳಿಕ ಈ ಲಕ್ಷಣಗಳು ಕಾಣುತ್ತಾ!? ಹಾಗಿದ್ರೆ ಇದು ಹೊಟ್ಟೆ ಕ್ಯಾನ್ಸರ್!
ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಅವರು, ತನಿಖೆಯನ್ನ ಸಿಐಡಿಗೆ ವಹಿಸಿರುವುದಾಗಿ ತಿಳಿಸಿದ್ದರು. ಅಲ್ಲದೇ ಕಾಲ್ತುಳಿತಕ್ಕೆ ಕಾರಣರಾದ ಆರ್ಸಿಬಿ ಆಡಳಿತ ಮಂಡಳಿ, ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ ಹಾಗೂ ಕೆಎಸ್ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.
ಸಿಎಂ ಸೂಚನೆ ಬೆನ್ನಲ್ಲೇ ಶುಕ್ರವಾರ ಕೆಎಸ್ಸಿಎ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಆರ್ಸಿಬಿ ಮ್ಯಾನೇಜ್ಮೆಂಟ್, ಡಿಎನ್ಎ ಇವೆಂಟ್ ಮ್ಯಾನೇಜ್ಮೆಂಟ್ ಹಾಗೂ ಕೆಎಸ್ಸಿಎ ನಿಂದ ಒಟ್ಟು 6 ಮಂದಿಯನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಕೆಎಸ್ಸಿಎನಲ್ಲಿ ಇಬ್ಬರು ಪದಾಧಿಕಾರಿಗಳು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.