ಚಿತ್ರದುರ್ಗ:- ಚಿತ್ರದುರ್ಗ ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಹೈಡ್ರಾಮ ಒಂದು ಜರುಗಿದೆ. 2ನೇ ಮದುವೆಗೆ ಹಸೆಮಣೆ ಏರಲು ಸಿದ್ಧವಾಗಿದ್ದ ಪತಿರಾಯನಿಗೆ ಮಂಟಪದಲ್ಲೇ ಮೊದಲ ಪತ್ನಿ ಚಪ್ಪಲಿ ಏಟು ಕೊಟ್ಟ ಘಟನೆ ನಡೆದಿದೆ.
4 ವರ್ಷದ ಹಿಂದೆ ತನುಜಾ ಎಂಬಾಕೆಯನ್ನ ಆರೋಪಿ ಕಾರ್ತಿಕ್ ಮದುವೆಯಾಗಿದ್ದ. ಹೀಗಿದ್ದೂ ಕಾರ್ತಿಕ್ ಯಾರಿಗೂ ಗೊತ್ತಾಗದಂತೆ ಚಿತ್ರದುರ್ಗದಲ್ಲಿ 2ನೇ ಮದುವೆಗೆ ಪ್ಲಾನ್ ಮಾಡಿದ್ದ. ವರದಕ್ಷಿಣೆ ಆಸೆಗೆ ಮತ್ತೊಮ್ಮೆ ಹಸಣೆ ಏರಲು ಸಿದ್ಧವಾಗಿದ್ದ ಎಂದು ಹೇಳಲಾಗಿದೆ. ಈ ವಿಚಾರ ಹೇಗೋ ಮೊದಲ ಪತ್ನಿಯ ಕಿವಿಗೆ ಬಿದ್ದಿದೆ. ಸುದ್ದಿ ತಿಳಿದು ಕುಟುಂಬಸ್ಥರೊಂದಿಗೆ ಮಂಟಪಕ್ಕೇ ಬಂದು ಧರ್ಮದೇಟು ಕೊಟ್ಟಿದ್ದಾಳೆ. ಆ ಮೂಲಕ ಕಾರ್ತಿಕ್ ಪತ್ನಿ ತನುಜಾ ಕುಟುಂಬಸ್ಥರಿಂದ ಎರಡನೇ ಮದುವೆಗೆ ಬ್ರೇಕ್ ಬಿದ್ದಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇತ್ತ ಮದುವೆಗೆ ತಯಾರಾಗಿದ್ದ ವಧುವಿನ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ.