ಭುವನೇಶ್ವರ್:- ನಾಲ್ವರು ಕಾಮುಕರಿಂದ ಇಬ್ಬರು ಅಪ್ರಾಪ್ತೆಯರ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ಒಡಿಶಾದ ಗಂಜಾಂನಲ್ಲಿ ಜರುಗಿದೆ. ಜೂ. 3 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಕಾಲ್ತುಳಿತ ಕೇಸ್: ಇದೊಂದು ಬೇವರ್ಸಿ ಸರ್ಕಾರ- ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಆರ್ ಅಶೋಕ್!
ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ 14 ಮತ್ತು 15 ವರ್ಷ ಇಬ್ಬರು ಹುಡುಗಿಯರನ್ನು ಅಪಹರಿಸಿ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಎಲ್ಲಾ ಆರೋಪಿಗಳೂ ವಿಶಾಖಪಟ್ಟಣಂಗೆ ಎಸ್ಕೇಪ್ ಆಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಹೆಣ್ಣುಮಕ್ಕಳು ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಿರ್ಜನ ಪ್ರದೇಶಕ್ಕೆ ಇಬ್ಬರನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ, ಜೊತೆಗೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಹುಡುಗಿಯರಿಗೆ ಮೊದಲು ಇಬ್ಬರು ಪುರುಷರು ಆಮಿಷವೊಡ್ಡಿದ್ದಾರೆ, ಈ ಪೈಕಿ ಒಬ್ಬ ಆರೋಪಿ ಸಂತ್ರಸ್ತೆಗೆ ಪರಿಚಯವಿದ್ದ. ಅವರೊಂದಿಗೆ ಇನ್ನಿಬ್ಬರು ಸೇರಿಕೊಂಡು ಅಪಹರಿಸಿದ ಬಳಿಕ ಕೃತ್ಯ ಎಸಗಿದ್ದಾರೆ ಅನ್ನೋದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ