ಬೆಂಗಳೂರು:- ಇತ್ತೀಚೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟ್ರೋಫಿ ಗೆದ್ದ ಖುಷಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಏರ್ಪಡಿಸಲಾಗಿತ್ತು. ಈ ವೇಳೆ ಅಪಾರ ಪ್ರಮಾಣದಲ್ಲಿ ಆರ್ ಸಿಬಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆ ಕಾಲ್ತುಳಿತ ಸಂಭವಿಸಿತು. ಈ ವೇಳೆ 11 ಮಂದಿ ಸಾವನ್ನಪ್ಪಿದ್ದರು.
11 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ನಮ್ಮ ಯೋಜನೆಗಳು ಮಹಿಳೆಯರ ಜೀವನದಲ್ಲಿ ದೊಡ್ಡ ಬದಲಾವಣೆ ತಂದಿದೆ – ಮೋದಿ!
ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆ ನಾಳೆ ಜಿಲ್ಲೆಯಲ್ಲಿ ನಡೆಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ನಾಳೆ ನಗರದ ವಾಲ್ಕಾಟ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ವಿಭಾಗೀಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಪ್ರಜಾಸೌಧ ಕಟ್ಟಡದ ಅಡಿಗಲ್ಲು ಹಾಗೂ ಮುಂಗಾರು ಉತ್ಸವ ಸೇರಿ ವಿವಿಧ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಬೇಕಿತ್ತು. ಆದರೆ ಚಿನ್ನಸ್ವಾಮಿಯಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಹಿನ್ನೆಲೆ ಕಾರ್ಯಕ್ರಮದ ಸಿದ್ಧತೆಗಳನ್ನು ಆರಂಭದಲ್ಲೇ ಮೊಟಕುಗೊಳಿಸಲಾಗಿದೆ.