ಮಂಗಳೂರು/ಬೆಂಗಳೂರು:– ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು NIA ಹೆಗಲಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸುವಂತೆ ಬಿಜೆಪಿ ನಾಯಕರು ಸೇರಿದಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಜ್ಯ ಗೃಹಸಚಿವಾಲಯ ರಾಷ್ಟ್ರೀಯ ತನಿಖಾ ದಳ ಕ್ಕೆ ವಹಿಸಿ ಆದೇಶ ಹೊರಡಿಸಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದರು. ಇದೀಗ ಅಧಿಕೃತವಾಗಿ NIA ಗೆ ಕೇಸ್ ವರ್ಗಾವಣೆ ಆಗಿದೆ.