ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದ್ದು ಮೂರು ದಿನಗಳ ಬಳಿಕ ಮಳೆ ಹೆಚ್ಚಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರದಲ್ಲಿ ಬುಧವಾರದಿಂದ ಮಳೆ ಹೆಚ್ಚಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.