ದೇವನಹಳ್ಳಿ:- ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಇಂದು ಮುಂಜಾನೆ ಸಂಭವಿಸಿದೆ. ಆಂಧ್ರ ಸಾರಿಗೆ ಬಸ್ಸಿನಲ್ಲಿದ್ದ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಸಾವಿಗೀಡಾಗಿದ್ದಾರೆ.
ಇಂದಿನಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಅಬ್ಬರ: ಇಲ್ಲೆಲ್ಲಾ ರೆಡ್ ಅಲರ್ಟ್ ಘೋಷಣೆ!
ಆಂಧ್ರ ಸಾರಿಗೆ ಬಸ್ ಹಾಗೂ ಲಾರಿ ಮಧ್ಯೆ ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಕ್ಕಿ ಸಂಭವಿಸಿದೆ. ಆಂಧ್ರ ಸಾರಿಗೆ ಬಸ್ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಬಸ್ ಓವರ್ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.