ಅಹಮದಾಬಾದ್: ಅಹಮದಾಬಾದ್ನಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮೃತಪಟ್ಟಿದ್ದಾರೆ.. 242 ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಹೊತ್ತು ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್ನ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಸುಮಾರು ಮಧ್ಯಾಹ್ನ 2 ಗಂಟೆಗೆ ಅಪಘಾತಕ್ಕೀಡಾಗಿದೆ.
ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮೆಘಾನಿನಗರ ಪ್ರದೇಶದಲ್ಲಿ ಪತನಗೊಂಡಿರುವುದು ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಇನ್ನೂ ಲಂಡನ್ಗೆ ತೆರಳೋದಕ್ಕೆ ಅಂತ ಏರ್ ಇಂಡಿಯಾ ಫ್ಲೈಟ್ ಏರಿದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ದುರಂತ ಅಂತ್ಯ ಕಂಡಿದ್ದಾರೆ. ಇದೀಗ ಅಚ್ಚರಿಯ ಅಂಶವೊಂದು ಬೆಳಕಿಗೆ ಬಂದಿದೆ. ಮಾಜಿ ಸಿಎಂ ವಿಜಯ್ ರೂಪಾನಿಯ ಲಕ್ಕಿ ನಂಬರ್ ಸಾವಿನಲ್ಲೂ ಜೊತೆಯಾಗಿದೆ. 1206 ಮಾಜಿ ಸಿಎಂ ವಿಜಯ್ ರೂಪಾನಿಯವರ ಲಕ್ಕಿ ನಂಬರ್
ಆಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ವಿಜಯ್ ರೂಪಾನಿ ಅವರ ಸ್ಕೂಟರ್ ಮತ್ತು ಮೊದಲ ಕಾರು 1206 ನೋಂದಣಿ ಸಂಖ್ಯೆಯನ್ನು ಹೊಂದಿವೆ. ಈ ಕಾರು ಮತ್ತು ಸ್ಕೂಟರ್ ಈಗಲೂ ಅವರ ಮನೆಯ ಪಾರ್ಕಿಂಗ್ ಜಾಗದಲ್ಲಿವೆ. ಈ ಸಂಖ್ಯೆ ವಿಜಯ್ ರೂಪಾನಿಗೆ ರಾಜಕೀಯವಾಗಿಯೂ ಯಶಸ್ಸು ತಂದು ಕೊಟ್ಟಿದೆ.
ನಿನ್ನೆ ಅವರು ಲಂಡನ್ಗೆ ತೆರಳಲು ಏರ್ಪೋರ್ಟ್ನಲ್ಲಿ ಬೋರ್ಡಿಂಗ್ ಆದ ಸಮಯ.. 12 ಗಂಟೆ 10 ನಿಮಿಷ.. ಅವರ ಸೀಟ್ ನಂಬರ್ ಕೂಡ 12 ಆಗಿತ್ತು. ಇದೀಗ ಕೊನೆಯ ಪ್ರಯಾಣದ ದಿನಾಂಕ ಜೂನ್ 12, ಅಂದರೆ 12-06.. ಹೀಗೆ ಲಕ್ಕಿ ನಂಬರ್ ದಿನವೇ ವಿಜಯ್ ರೂಪಾನಿ ಬದುಕು ಅಂತ್ಯವಾಗಿದ್ದು ನಿಜಕ್ಕೂ ಅಚ್ಚರಿ ಮೂಡಿಸಿದೆ.
ಇನ್ನೂ ವಿಮಾನದಲ್ಲಿ ಇಬ್ಬರು ಪೈಲಟ್ಗಳು ಮತ್ತು 10 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಏರ್ ಇಂಡಿಯಾ ಪ್ರಕಾರ, ವಿಮಾನದಲ್ಲಿದ್ದ 230 ಪ್ರಯಾಣಿಕರಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಬ್ಬ ಕೆನಡಾ ಮತ್ತು ಏಳು ಪೋರ್ಚುಗೀಸ್ ನಾಗರಿಕರಾಗಿದ್ದಾರೆ.