ಮುಂಬೈ:- ಇಂದು ಅಹಮದಾಬಾದ್ ಗೆ ಭೇಟಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರು, ಗುರುವಾರ ಏರ್ ಇಂಡಿಯಾ ವಿಮಾನ ದುರಂತದ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ ಕೇಸ್: ನಾಲ್ವರು ಅರೆಸ್ಟ್!
ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಆಗಮಿಸಿ, ಅಹಮದಾಬಾದ್ ವಿಮಾನ ಪತನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಗುರುವಾರ ಮಧ್ಯಾಹ್ನ ಸಂಭವಿಸಿದ್ದ ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 265 ಜನ ಮೃತಪಟ್ಟಿದ್ದಾರೆ. ಮೆಡಿಕಲ್ ಕಾಲೇಜು ಹಾಸ್ಟೆಲ್ ಮೇಲೆಯೇ ವಿಮಾನ ಪತನವಾಗಿದ್ದರಿಂದ ಅಲ್ಲಿದ್ದವರೂ ಅನೇಕರು ಮೃತಪಟ್ಟಿದ್ದಾರೆ. ಸಾವಿನ ಬಗ್ಗೆ ಅಧಿಕೃತ ಘೋಷಣೆ ಡಿಎನ್ಎ ಪರೀಕ್ಷೆಯ ನಂತರ ಪ್ರಕಟವಾಗಲಿದೆ.
ಇನ್ನೂ ಮೋದಿ ಭೇಟಿ ವೇಳೆ ಈ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಪು, ಕೇಂದ್ರ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ, ಇತರ ಭದ್ರತಾ ಅಧಿಕಾರಿಗಳು ಜೊತೆಗಿದ್ದರು.
ಇಂದು ಬೆಳ್ಳಂ ಬೆಳಗ್ಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ, ಅಲ್ಲಿಂದ ಮೇಘನಿನಗರ ಪ್ರದೇಶದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ನೇರವಾಗಿ ಕಾರಿನಲ್ಲೇ ತೆರಳಿದರು. ಇಲ್ಲಿ ಅಧಿಕಾರಿಗಳ ಬಳಿಕ ಘಟನೆ ಬಗ್ಗೆ ಮಾಹಿತಿ ಪಡೆದ ಮೋದಿ ಬಳಿಕ ಅಹಮದಾಬಾದ್ನ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ವಿಮಾನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಬಳಿಕ ಅಲ್ಲಿಂದ ಏರ್ಪೋರ್ಟ್ನತ್ತ ತೆರಳಿದ್ದಾರೆ.