ರಾಮನಗರ: ನಿನ್ನೆ ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ಕೆರೆಯ ಬಳಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳ ಬ್ಯಾಗ್ ಮತ್ತು ಐಡಿ ಕಾರ್ಡ್ ಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದರು. ಇದೀಗ ವಿದ್ಯಾರ್ಥಿನಿಯು ಶವವಾಗಿ ಪತ್ತೆಯಾಗಿದ್ದಾಳೆ. ಮಹಾಲಕ್ಷ್ಮೀ (20) ಮೃತ ವಿದ್ಯಾರ್ಥಿನಿಯಾಗಿದ್ದು,
ರಾಮನಗರದ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದು, ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು. ಬಳಿಕ ಸಂಜೆಯ ಹೊತ್ತಿಗೆ ಸಿಂಗರಾಜಿಪುರ ಕೆರೆಯ ದಡದಲ್ಲಿ ವಿದ್ಯಾರ್ಥಿನಿಯ ಐಡಿ ಕಾರ್ಡ್, ಬ್ಯಾಗ್ ಪತ್ತೆಯಾಗಿತ್ತು.
ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಈ ಹಿನ್ನೆಲೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದರು. ಇಂದು ಬೆಳಗ್ಗೆ ಕೆರೆಯಲ್ಲಿ ವಿದ್ಯಾರ್ಥಿನಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.