ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಗುರುವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ 265 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಈ ಹಿಂದೆ ಹೇಳಿದ್ದರು. ಆದರೆ, ಈಗ ಸಾವಿನ ಸಂಖ್ಯೆ 274 ಕ್ಕೆ ಏರಿದೆ. ಇವರಲ್ಲಿ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸದಸ್ಯರು, 33 ಇತರರು.
ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಅಪಘಾತದ ಸಮಯದಲ್ಲಿ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್ಗಳು ಮತ್ತು 10 ಕ್ಯಾಬಿನ್ ಸಿಬ್ಬಂದಿ ಇದ್ದರು. ಬಿಜೆ ವೈದ್ಯಕೀಯ ಕಾಲೇಜು ಆವರಣದಲ್ಲಿ ವಿಮಾನ ಅಪಘಾತಕ್ಕೀಡಾಗಿ ಒಬ್ಬರನ್ನು ಹೊರತುಪಡಿಸಿ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ವೈದ್ಯಕೀಯ ಕಾಲೇಜಿನಿಂದ ಬಂದ ಇನ್ನೂ 33 ಜನರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರಲ್ಲಿ ವೈದ್ಯರು, ವಿದ್ಯಾರ್ಥಿಗಳು, ಸಿಬ್ಬಂದಿ, ಅವರ ಕುಟುಂಬ ಸದಸ್ಯರು ಮತ್ತು ಮೇಘನಿನಗರ ಪ್ರದೇಶದ ಇತರರು ಇರಬಹುದು ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.