ದೊಡ್ಡಬಳ್ಳಾಪುರ: ಸ್ನೇಹಿತರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ಬಳಿ ನಡೆದಿದೆ. ವಿಜಯಕುಮಾರ್( 29) ಮೃತ ದುರ್ದೈವಿಯಾಗಿದ್ದು, ಪೂಜಪ್ಪ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.
ನೀವು ಕೂಡ ಜಾಸ್ತಿ ಉಪ್ಪಿನಕಾಯಿ ತಿಂತೀರಾ!? ಹಾಗಿದ್ರೆ ಈ ಸಮಸ್ಯೆಗಳು ಗ್ಯಾರಂಟಿ!
ಮಾಲೂರು ಮೂಲದ ವ್ಯಕ್ತಿಗಳಾಗಿದ್ದ ವ್ಯಕ್ತಿಗಳು, ಜಲಜೀವನ್ ಮಿಷನ್ ಯೋಜನೆಯಲ್ಲಿ ಗಾರೆ ಕೆಲಸ ಮಾಡುತ್ತಿದ್ದರು. ಕ್ಷುಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದ್ದು, ತಲೆಗೆ ಮಾರಕಾಸ್ತ್ರದಿಂದ ಸ್ನೇಹಿತನ ಮೇಲೆ ಹಲ್ಲೆ ಮಾಡಿದ್ದಾನೆ.
ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸುವ ವೇಳೆ ಸಾವನ್ನಪ್ಪಿದ್ದು, ಆರೋಪಿಯನ್ನು ವಶಕ್ಕೆ ಪಡೆದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.