ಕಾರವಾರ:- ಭಾರೀ ಮಳೆ ಹಿನ್ನೆಲೆ ಇಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈ ರಾಶಿಯವರು ಹೈನುಗಾರಿಕೆ ಉದ್ಯಮ ಪ್ರಾರಂಭ ಮಾಡಿ ಶುಭದಾಯಕ: ಮಂಗಳವಾರದ ರಾಶಿ ಭವಿಷ್ಯ 17 ಜೂನ್ 2025!
ಜಿಲ್ಲೆಯ ಈ 8 ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ಕುಮಟಾ, ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ