ಹಾಸನ:- ಧಾರಕಾರ ಮಳೆ ಹಿನ್ನೆಲೆ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.
ಹಾಸನದಲ್ಲಿ ನಿಲ್ಲದ ಪುಡಿರೌಡಿಗಳ ಹಾವಳಿ: ಕೊಲೆ ಮಾಡಲು ತನ್ನೊಟ್ಟಿಗೆ ಬರದ ಯುವಕನಿಗೆ ಮಾರಣಾಂತಿಕ ಹಲ್ಲೆ!
ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಹಾಸನ, ಬೇಲೂರು ಭಾಗದಲ್ಲಿ ಬಿರುಗಾಳಿ ಸಹಿತ ವರುಣ ಅಬ್ಬರಿಸುತ್ತಿದ್ದಾನೆ.
ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲೆಯ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದೆ. ಸಕಲೇಶಪುರ, ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ