ಮಡಿಕೇರಿ: ಆರ್.ಸಿ.ಬಿ ಪಂದ್ಯದ ಗೆಲುವಿನ ಸಂಭ್ರಮಾಚರಣೆಯಲ್ಲಿ ಉಂಟಾದ ಕಾಲ್ತುಳಿತದಲ್ಲಿ ಅಧಿಕಾರಿಗಳ ತಲೆದಂಡ ಹಾಗೂ ಪ್ರಕರಣವನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಮಡಿಕೇರಿಯ ಜಿಲ್ಲಾಧಿಕಾರಿ ಕಛೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರ ಹಾಗೂ ನಾಯರ ವಿರುದ್ಧ ಧಿಕ್ಕಾರ ಕೂಗಿದರು ತಮ್ಮ ತಪ್ಪನ್ನು ಮರೆಮಾಚಲು ದಕ್ಷ ಅಧಿಕಾರಿಗಳ ತಲೆ ದಂಡಮಾಡಿರೋದು ಸರಿಯಲ್ಲ ಎಂದು ಆಕ್ರೋಶ ಹೊರ ಹಾಕಿದ್ರು.
Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!
ಜೊತೆಗೆ ಸರ್ಕಾರ ಪ್ರಕರಣದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಇದರಲ್ಲಿ ಭಾಗಿಯಾದ ನಾಯರು ಕೂಡಲೆ ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ರು. ಬಳಿಕ ಮಾತನಾಡಿದ ಅಪ್ಪಚ್ಚು ರಂಜನ್ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ವಿಜಯೋತ್ಸವ ಆಯೋಜಿಸಿತ್ತು.
ಹಿರಿಯ ಪೊಲೀಸ್ ಅಧಿಕಾರಿಗಳು ಕಾನೂನು ಸುವ್ಯವಸ್ಥೆಯ ಬಗ್ಗೆ ಸರ್ಕಾರಕ್ಕೆ ಮೊದಲೇ ಮಾಹಿತಿ ನೀಡಿದ್ದರೂ ಸಹ, ಅವರ ಮಾತನ್ನು ಲೆಕ್ಕಿಸದೇ ವಿಜಯೋತ್ಸವ ಆಚರಿಸಿ 11 ಮಂದಿ ಅಮಾಯಕರ ಸಾವಿಗೆ ಸರ್ಕಾರ ಕಾರಣವಾಗಿದೆ ಸರ್ಕಾರವು ತನ್ನ ವೈಫಲ್ಯ ಮುಚ್ಚಿಕೊಳ್ಳಲು ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಅವರ ಮನೋ ಸ್ಥೈರ್ಯ ಕುಗ್ಗಿಸಲು ಕಾರಣವಾಗಿದೆ.
ಇದರೊಂದಿಗೆ ಇಡೀ ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಆತ್ಮಬಲ ಕಸಿಯುವ ಯತ್ನಕ್ಕೆ ಕೈ ಹಾಕಿದೆ. ಇಂತಹ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಅಧಿಕಾರದಲ್ಲಿ ಮುಂದುವರೆಯಲು ಅರ್ಹರಲ್ಲ ಎಂದು ಅಸಮಾಧಾನ ಹೊರಹಾಕಿದರು.