ಮಂಡ್ಯ: ಶ್ರೀರಂಗಪಟ್ಟಣತಾಲೂಕಿನಲ್ಲಿರುವ ಪ್ರಸಿದ್ಧ ಕೃಷ್ಣರಾಜಸಾಗರ ಅಣೆಕಟ್ಟೆಯ ಬೃಂದಾವನ ಉದ್ಯಾನವನ್ನು ಉತ್ತಮ ದರ್ಜೆಗೆ ಏರಿಸಲು ಮತ್ತು ಪ್ರವಾಸಿಗರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಅಮ್ಯೂಸ್ಮೆಂಟ್ ಪಾರ್ಕ್ ಮಾದರಿ kRS ಅಭಿವೃದ್ಧಿ ಮಾಡಲು ಚಿಂತಿಸಿದೆ. ಇನ್ನೂ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿರುವ ಸುಮಲತಾ ಅಂಬರೀಶ್ ಅವರು ಸರ್ಕಾರದ ನಡೆಗೆ ಸೋಷಿಯಲ್ ಮೀಡಿಯಾ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.
Smartphone Explosion: ಈ ತಪ್ಪುಗಳನ್ನು ಎಂದಿಗೂ ಮಾಡ್ಬೇಡಿ: ಮೊಬೈಲ್ ಬ್ಲಾಸ್ಟ್ ಆಗತ್ತೆ!
ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯು ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ. ಇದು ಕೇವಲ ಒಂದು ಅಣೆಕಟ್ಟಲ್ಲ; ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ.
ನಮ್ಮ ಮಂಡ್ಯದ ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ಇಂತಹ ದುಂದು ವೆಚ್ಚಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಯೋಜನೆಯ ವಿರೋಧಕ್ಕೆ ನನ್ನ ಬೆಂಬಲ ಸೂಚಿಸುತ್ತಿದ್ದೇನೆ. ಶತಮಾನಗಳ ಇತಿಹಾಸವಿರುವ ಕನ್ನಂಬಾಡಿ ಕಟ್ಟೆಯ ಅಸ್ಥಿತ್ವಕ್ಕೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಜಾರಿಗೆ ತರಲು ಸ್ವಾಭಿಮಾನಿ ಮಂಡ್ಯದ ಜನತೆ ಅವಕಾಶ ಕೊಡಲಾರೆವು ಎಂದು ಸರ್ಕಾರಕ್ಕೆ ಮಾಜಿ ಸಂಸದೆ ಎಚ್ಚರಿಕೆ ನೀಡಿದ್ದಾರೆ.