ಬೆಂಗಳೂರು:- ಮದುವೆಯಾಗುವುದಾಗಿ ವಿಚ್ಛೇದಿತ ಮಹಿಳೆ ನಂಬಿಸಿ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಯುವಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಆರೋಪಿ ಶ್ರೀನಿವಾಸ್ ಎಂಬಾತನನ್ನು ಕಾಡುಗೋಡಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ!
ವಿಚ್ಛೇದನದ ಬಳಿಕ ಜೀವನಕ್ಕಾಗಿ ಬೆಂಗಳೂರಿಗೆ ಬಂದಿದ್ದ ಮಹಿಳೆ 2019ರಲ್ಲಿ ಬೆಂಗಳೂರಿನ ಕಾಡುಗೋಡಿಗೆ ಬಂದಿದ್ದರು. ಆರೋಪಿ ಶ್ರೀನಿವಾಸ್ ನಡೆಸುತ್ತಿದ್ದ ಡಿಜಿಟಲ್ ಸೇವಾ ಕೇಂದ್ರದಲ್ಲಿ ರಿಸೆಪ್ಷನಿಸ್ಟ್ ಆಗಿ ಸೇರಿಕೊಂಡಿದ್ದರು. ದಿನಕಳೆದಂತೆ ಆರೋಪಿಯೊಂದಿಗೆ ಸ್ನೇಹ ಹಾಗೂ ಪ್ರೀತಿ ಮೂಡಿತ್ತು.
ಹೀಗಿರುವಾಗಲೇ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಶ್ರೀನಿವಾಸ್ ಆಕೆಯೊಂದಿಗೆ ಬಾಡಿಗೆ ಮನೆ ಮಾಡಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿಕೊಂಡು ಆ ಕ್ಷಣದ ವಿಡಿಯೋವನ್ನು ಮೊಬೈಲ್ ಫೋನ್ನಲ್ಲಿ ರೆಕಾರ್ಡ್ ಮಾಡಿ ಇಟ್ಟುಕೊಂಡಿದ್ದಾನೆ.
ನಂತರ ಆರೋಪಿಯು ದೈಹಿಕ ಸಂಪರ್ಕದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಆರಂಭಿಸಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನಡಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.