ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಚಿನ್ನದ ಬೆಲೆ ಏರಿಕೆ ಯಾವಾಗ ನಿಲ್ಲುತ್ತದೆ ಅಥವಾ ಕಡಿಮೆಯಾಗುತ್ತದೆ ಎಂದು ಹೇಳುವುದು ಕಷ್ಟವಾಗಿದೆ. ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಚಿನ್ನವನ್ನು ವಿಶ್ವದ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗಿದೆ. ಇದರಿಂದ ಬಂಗಾರದ ಬೆಲೆ ಗಗನಕ್ಕೇರಿತ್ತು. ನಿಧಾನವಾಗಿ ಕುಸಿತ ಕಂಡಿದ್ದ ಚಿನ್ನದ ದರ ಮತ್ತೆ ಏರಿಕೆ ಕಾಣಲು ಆರಂಭಿಸಿತ್ತು.
ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?
ಚಿನ್ನದ ಬೆಲೆ ಇಂದು ಗ್ರಾಮ್ಗೆ 15 ರೂನಷ್ಟು ಏರಿದರೆ, ಬೆಳ್ಳಿ ಬೆಲೆ 1 ರೂ ಹೆಚ್ಚಳ ಕಂಡಿದೆ. ಆಭರಣ ಚಿನ್ನದ ಬೆಲೆ 9,250 ರೂ ಇದ್ದದ್ದು 9,265 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,108 ರೂಗೆ ಏರಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಇವತ್ತು ಹೆಚ್ಚಿನ ವ್ಯತ್ಯಯ ಆಗಿಲ್ಲ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,01,080 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,200 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 19ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,650 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,080 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,810 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,120 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,650 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,080 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,120 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 92,650 ರೂ
- ಚೆನ್ನೈ: 92,650 ರೂ
- ಮುಂಬೈ: 92,650 ರೂ
- ದೆಹಲಿ: 92,800 ರೂ
- ಕೋಲ್ಕತಾ: 92,650 ರೂ
- ಕೇರಳ: 92,650 ರೂ
- ಅಹ್ಮದಾಬಾದ್: 92,700 ರೂ
- ಜೈಪುರ್: 92,800 ರೂ
- ಲಕ್ನೋ: 92,800 ರೂ
- ಭುವನೇಶ್ವರ್: 92,650 ರೂ