ಬೆಂಗಳೂರು: ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನ ಭದ್ರತಾ ಪಡೆಯ ಮೇಲ್ ಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಒಂದೇ ವಾರದಲ್ಲಿ ಇದು ಎರಡನೇ ಹುಸಿ ಬಾಂಬ್ ಮೇಲ್ ಆಗಿದೆ. ಜೂ.13, 16ರಂದು ಎರಡು ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು.
ಉಗ್ರ ಅಜ್ಮಲ್ ಕಸಬ್ ಗೆ ಗಲ್ಲು ಹಾಕಿದ್ದು ಸರಿಯಿಲ್ಲ ಅಂತಲು ಉಗ್ರನ ಹೆಸರಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಶೌಚಾಲಯದ ಪೈಪ್ಲೈನ್ನಲ್ಲಿ ಬಾಂಬ್ ಇಟ್ಟಿದ್ದು, ಪಝಲ್ ಗೇಮ್ ರೀತಿ ಎರಡು ಕಡೆ ಬಾಂಬ್ ಇಟ್ಟಿದ್ದು ಪ್ಲ್ಯಾನ್ ಎ ಫೇಲ್ ಆದರೆ ಪ್ಲ್ಯಾನ್ ಬಿ’ ಎಂದು ಬೆದರಿಕೆ ಸಂದೇಶ ರವಾನಿಸಲಾಗಿದೆ.
ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?
ಬೆದರಿಕೆ ಮೇಲ್ ಹಿನ್ನೆಲೆ ಎಲ್ಲೆಡೆ ಪರಿಶೀಲನೆ ಮಾಡಿದ ಅಧಿಕಾರಿಗಳು ಬಳಿಕ ಇದೊಂದು ಹುಸಿ ಬಾಂಬ್ ಮೇಲ್ ಎಂದು ತಿಳಿಸಿದ್ದಾರೆ. ಸದ್ಯ ಕೆಂಪೇಗೌಡ ಏರ್ಪೋರ್ಟ್ ಪೊಲೀಸರು ಮತ್ತು ಅಧಿಕಾರಿಗಳಿಗೆ ಈ ಹುಸಿ ಬಾಂಬ್ ಮೇಲ್ ಮತ್ತು ಕರೆಗಳು ತಲೆ ನೋವಾಗಿದ್ದು, ಹುಸಿ ಬಾಂಬ್ ಬೆದರಿಕೆ ಬಂದ ಮೇಲ್ ಐಡಿಗಳ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.