ಬೆಂಗಳೂರು: ವಸತಿ ಯೋಜನೆಗಳಲ್ಲಿ ಮುಸ್ಲಿಂಮರಿಗೆ ಶೇ 10 ರಷ್ಟು ಮೀಸಲಾತಿ ಇರುವುದನ್ನು 15% ಗೆ ಏರಿಕೆ ಮಾಡಲು ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಿದ್ದಾರೆ. ಹೌದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿ ಹೆಚ್ಚಳಕ್ಕೆ ಮಹತ್ವದ ತೀರ್ಮಾನ ಮಾಡಿದೆ. ವಸತಿಯೋಜನೆಯಡಿ ಮುಸ್ಲಿಂ ಸೇರಿದಂತೆ ಇತರೆ ಅಲ್ಪ ಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಏರಿಸಲು ಸಚಿವ ಸಂಪುಟ ಅಸ್ತು ಎಂದಿದೆ.
ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?
ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿಯನ್ನು ಪ್ರಸ್ತುತ ಶೇ.10 ರಿಂದ ಶೇ.15 ಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಿಎಂ ಸಿದ್ದರಾಮಯ್ಯನವರ ಮುಂದೆ ಇಟ್ಟಿದ್ದರು. ಇದೀಗ ಈ ಪ್ರಸ್ತಾವನೆಯನ್ನು ಇಂದಿನ ಕರ್ನಾಟಕ ಸಚಿವ ಸಂಪುಟ ಅಂಗೀಕರಿಸಿದೆ. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜಾರಿಗೊಳಿಸುವ ಎಲ್ಲಾ ವಸತಿ ಯೋಜನೆಗಳಿಗೆ ಅನ್ವಯಿಸುತ್ತದೆ.
ರಾಜ್ಯದಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಲ್ಲಿ ಮೀಸಲಾತಿ ಸೌಲಭ್ಯ ಸಿಗಲಿದೆ. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಡಿ ನಿಗದಿಪಡಿಸುವ ಗುರಿಯಲ್ಲಿ ಅಲ್ಪಸಂಖ್ಯಾತರಿಗೆ 10% ಮೀಸಲಾತಿ ನಿಗದಿಯಾಗಿದೆ. ಈ ಮೀಸಲಾತಿಯನ್ನು ಇದೀಗ 15% ಏರಿಕೆ ಮಾಡಿ ಕ್ಯಾಬಿನೆಟ್ ಅನುಮೋದನೆ ಸಹ ನೀಡಿದೆ.