ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೃದಯ ವಿದ್ರಾಹಕ ಘಟನೆ ನಡೆದಿದೆ. ಹೈಟೆನ್ಷನ್ ವೈಯರ್ ಸ್ಪರ್ಶಿಸಿ 10 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಕೆಆರ್ ಪುರಂನಲ್ಲಿ ನಡೆದಿದೆ. ಅನಂತ್ (10) ಮೃತ ಬಾಲಕನಾಗಿದ್ದು,
ಹೈಟೆನ್ಷನ್ ವೈಯರ್ ಸ್ಪರ್ಶಿಸಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದ. ದೇಹದ ಶೇ.90 ರಷ್ಟು ಭಾಗ ಸುಟ್ಟುಹೋಗಿತ್ತು. ಬಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಮಗನ ಸಾವಿನ ಕುರಿತು ತಾಯಿಗೆ ಕುಟುಂಬಸ್ಥರು ವಿಚಾರ ತಿಳಿಸಿದ್ದಾರೆ. ಆಸ್ಪತ್ರೆ ಮುಂದೆ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ. ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.