ಬೆಂಗಳೂರು: BJP ರಾಜ್ಯಾಧ್ಯಕ್ಷನಾಗಿ ಒಂದೂಕಾಲು ವರ್ಷ ಶ್ರದ್ಧೆಯಿಂದ ಕೆಲಸ ಮಾಡಿರುವ ತೃಪ್ತಿ ನನಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ನಗರದಲ್ಲಿ ಮುಂದಿನ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷ ಕೊಟ್ಟ ಎಲ್ಲಾ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸ್ತಿದ್ದೇನೆ.
ಟೆಕ್ ಉದ್ಯಮಕ್ಕೆ ಸೆಡ್ಡು: 16ನೇ ವಯಸ್ಸಿನಲ್ಲಿಯೇ 100 ಕೋಟಿ ಮೌಲ್ಯದ ಕಂಪನಿಯ ಮುಖ್ಯಸ್ಥೆ..!
ಪ್ರತಿ ಸಂದರ್ಭದಲ್ಲೂ ಹೈಕಮಾಂಡ್ಗೆ ಮಾಹಿತಿ ಕೊಡ್ತಾ ಬಂದಿದ್ದೇನೆ. ವರಿಷ್ಠರ ತೀರ್ಮಾನ ಏನಿರುತ್ತದೆ ಎಂದು ಕಾದು ನೋಡಬೇಕು. ಅಂತಿಮವಾಗಿ ಯಾರನ್ನು ಅಧ್ಯಕ್ಷರಾಗಿ ಮಾಡಬೇಕು. ಯಾರನ್ನು ಅಧ್ಯಕ್ಷರನ್ನಾಗಿ ಮಾಡಿದರೆ ಒಳ್ಳೆಯದು ಎಂದು ವರಿಷ್ಠರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ.
ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆಸಿದ ಮಾತುಕತೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ, ವಿರೋಧ ಪಕ್ಷವಾಗಿ ಬಿಜೆಪಿ ತನ್ನ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ವಿಜಯೇಂದ್ರ ಹೇಳಿದರು.