ಶ್ರೀನಗರ:- ಕಳೆದ ಕೆಲವು ದಿನಗಳ ಹಿಂದೆ ಕಾಶ್ಮೀರದಲ್ಲಿ ಹಿಂದುಗಳ ಮೇಲೆ ಉಗ್ರರು ತಮ್ಮ ದುಷ್ಕೃತ್ಯ ಮೆರೆದಿದ್ದರು. ಈ ಘಟನೆ ಭಾರತೀಯರನ್ನು ಕೆರಳಿಸುವಂತೆ ಮಾಡಿತ್ತು. ಇನ್ನೂ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?
ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಬಂಧಿತರು. ಇಬ್ಬರು ಪಹಲ್ಗಾಮ್ ನಿವಾಸಿಗಳಾಗಿದ್ದು, ನಿಷೇಧಿತ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಸಂಘಟನೆಗೆ ಸೇರಿದ ಮೂವರು ಉಗ್ರರಿಗೆ ಆಶ್ರಯ ನೀಡಿದ್ದರು. ಇನ್ನೂ ತನಿಖೆ ವೇಳೆ, ಬಂಧಿತರು ದಾಳಿಕೋರರ ಗುರುತುಗಳನ್ನು ಬಹಿರಂಗಪಡಿಸಿದ್ದು, ಉಗ್ರರು ಪಾಕಿಸ್ತಾನಿ ಪ್ರಜೆಗಳು ಎಂದು ದೃಢಪಟ್ಟಿದೆ.
ಆರೋಪಿಗಳ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.