ಬೆಂಗಳೂರು:- ಕರ್ನಾಟಕ ರಾಜ್ಯ ಸರ್ಕಾರವು ದ್ವೇಷ ಭಾಷಣ, ದ್ವೇಷದ ಅಪರಾಧಗಳು ಮತ್ತು ಸುಳ್ಳು ಸುದ್ದಿಗಳನ್ನು ತಡೆಗಟ್ಟಲು ಪ್ರತ್ಯೇಕ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ಸುಳ್ಳು ಸುದ್ದಿ ಹಾವಳಿಗೆ ಬ್ರೇಕ್ ಹಾಕಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ತೀರ್ಮಾನ ಮಾಡಿದೆ. ದ್ವೇಷ ಭಾಷಣ, ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ವಿಧೇಯಕ ಜಾರಿಗೆ ತರಲು ಮುಂದಾಗಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿದುಬಂದಿದೆ.
33 ಎಸೆತಕ್ಕೆ ಶತಕ..ಶರವೇಗದ ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ ಅಭಿಷೇಕ್!
ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ವಿಧೇಯಕ ಮಂಡನೆಗೆ ಈಗಾಗಲೇ ಕಳೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಇದಕ್ಕೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗಲಿದೆ. ಕರ್ನಾಟಕ ತಪ್ಪು ಮಾಹಿತಿ ರಚನೆ ಮತ್ತು ನಕಲಿ ಸುದ್ದಿ ನಿಷೇಧ ಮಸೂದೆ 2025 ರ ಅಡಿಯಲ್ಲಿ, ಸಾಮಾಜಿಕ ಮಾಧ್ಯಮ ಬಳಕೆದಾರರು ಕಂಡುಬಂದಲ್ಲಿ ಸರ್ಕಾರವು ಏಳು ವರ್ಷಗಳವರೆಗೆ ಶಿಕ್ಷೆ ಅಥವಾ 10 ಲಕ್ಷ ರೂ. ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.
ಸಾಮಾಜಿಕ ಮಾಧ್ಯಮದಲ್ಲಿ ಅಥವಾ ಪ್ರಕಟಣೆಗಳಲ್ಲಿ ತಪ್ಪು ಮಾಹಿತಿ ನೀಡಿದರೆ ಎರಡರಿಂದ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ. ಈ ಅಪರಾಧಗಳನ್ನು ಸಂಜ್ಞೇಯವೆಂದು ಪರಿಗಣಿಸಲಾಗುತ್ತದೆ. ಅಲ್ಲದೇ ಇದು ಜಾಮೀನು ರಹಿತ ಪ್ರಕರಣವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು ಹಾಗೂ ದ್ವೇಷ ಭಾಷಣ ಮಾಡುವವರು ಎಚ್ಚರಿಕೆಯಿಂದ ಇರಬೇಕು. ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆಗೆ ವಿಧೇಯಕ ಜಾರಿಗೆ ಪ್ರಸ್ತಾಪಿಸಿದ್ದು, ದ್ವೇಷ ಭಾಷಣ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷಣೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾಗ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ 5 ಸಾವಿರ ದಂಡದ ಜತೆಗೆ ಶಿಕ್ಷೆ ವಿಧಿಸಲು ಪ್ರಸ್ತಾಪಿಸಲಾಗಿದೆ.
ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ನಿಗಾ ಇಟ್ಟು ನಿಯಂತ್ರಿಸಲು ತಪ್ಪು ಮಾಹಿತಿ ಹಾಗೂ ಸುಳ್ಳು ಸುದ್ದಿ ಹರಡುವುದನ್ನು ನಿಯಂತ್ರಿಸಲು ವಿಧೇಯಕ ಜಾರಿಗೆ ತರಲು ಚರ್ಚಿಸಲಾಗಿದೆ. ಗೃಹ ಇಲಾಖೆ ನೀಡಿರುವ ಮಾಹಿತಿ ಪ್ರಕಾರ 2021 ರಿಂದ 2024 ವರೆಗೆ ರಾಜ್ಯದಲ್ಲಿ ಒಟ್ಟು 247 ಸುಳ್ಳು ಸುದ್ದಿ ಪ್ರಕರಣ ವರದಿಯಾಗಿವೆ. ಇವುಗಳನ್ನು ಜಿಲ್ಲಾ ಮಟ್ಟದಲ್ಲಿ ಸಾಮಾಜಿಕ ಜಾಲತಾಣಗಳ ಮಾನಿಟರಿಂಗ್ ಸೆಲ್ಗಳನ್ನು ತೆರೆಯಲಾಗಿದೆ. ಇದರ ಮೂಲಕ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲಾಗುತ್ತಿದೆ. ಗುಪ್ತ ಮಾಹಿತಿ ಸಿಬ್ಬಂದಿ ಹಾಗೂ ಬೀಟ್ ಸಿಬ್ಬಂದಿ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ.