ಟೀಮ್ ಇಂಡಿಯಾ ಕೋಚ್ ಆಗಲು ನಾನು ರೆಡಿ ಎಂದು ಮಾಜಿ ಆಟಗಾರ ಸೌರವ್ ಗಂಗೂಲಿ ಹೇಳಿದ್ದಾರೆ. ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾರ್ಗದರ್ಶಕರಾಗಿರುವ ದಾದಾ ಮುಂದೊಂದು ದಿನ ಟೀಮ್ ಇಂಡಿಯಾದ ಕೋಚ್ ಆಗುವ ವಿಶ್ವಾಸದಲ್ಲಿದ್ದಾರೆ.
ಹಾಸನದಲ್ಲೊಂದು ವಿದ್ರಾವಕ ಘಟನೆ: ಹೆಂಡತಿ ಊಟ ಬಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಗಂಡ ಸಾವು!
ಸಂದರ್ಶನವೊಂದರಲ್ಲಿ ಕಾಣಿಸಿಕೊಂಡಿದ್ದ ಸೌರವ್ ಗಂಗೂಲಿಗೆ, ಭಾರತದ ಮುಖ್ಯ ಕೋಚ್ ಆಗಿ ಕೆಲಸ ಮಾಡಲು ನೀವು ಎಂದಾದರೂ ಆಸಕ್ತಿ ಹೊಂದಿದ್ದೀರಾ ಎಂದು ಕೇಳಲಾಗಿತ್ತು. ನಾನು ಅದರ ಬಗ್ಗೆ ಎಂದಿಗೂ ಯೋಚಿಸಲಿಲ್ಲ. ಏಕೆಂದರೆ ಕ್ರಿಕೆಟ್ನಿಂದ ನಿವೃತ್ತರಾದ ನಂತರ, ನಾನು ಆಡಳಿತಕ್ಕೆ ಹೋದೆ. ನಾನು ನನ್ನನ್ನು ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಮತ್ತು ಬಿಸಿಸಿಐ ಅಧ್ಯಕ್ಷನನ್ನಾಗಿ ಮಾಡಿಕೊಂಡೆ. ಹೀಗಾಗಿ ನಾನು ಕೋಚ್ ಹುದ್ದೆ ಬಗ್ಗೆ ಯೋಚಿಸಿರಲಿಲ್ಲ ಎಂದು ಗಂಗೂಲಿ ಹೇಳಿದ್ದಾರೆ.
ಆದರೆ, ಭವಿಷ್ಯದಲ್ಲಿ ಏನಾಗುತ್ತದೆ ಎಂದು ಅವರು ಹೇಳಲು ಸಾಧ್ಯವಿಲ್ಲ. ಈಗ ನನಗೆ ಕೇವಲ 50 ವರ್ಷ. ಅವಕಾಶ ಬಂದರೆ, ನಾನು ಮುಖ್ಯ ಕೋಚ್ ಆಗಿ ಕೆಲಸ ಮಾಡಲು ಮುಕ್ತನಾಗಿದ್ದೇನೆ. ಅಂತಹದೊಂದು ಅವಕಾಶ ಸಿಕ್ಕರೆ ಖಂಡಿತವಾಗಿಯೂ ನಾನು ಕೋಚ್ ಹುದ್ದೆಯನ್ನು ಅಲಂಕರಿಸಲು ಸಿದ್ಧನಿದ್ದೇನೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.