ಬೆಂಗಳೂರು;- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಈ ರಾಶಿಯವರಿಗೆ ಹೊಸ ವ್ಯವಹಾರಗಳಿಂದ ಲಾಭ: ಸೋಮವಾರದ ರಾಶಿ ಭವಿಷ್ಯ 23 ಜೂನ್ 2025
ಇಂದು ಬೆಳಿಗ್ಗೆ 10 ರಿಂದ ಸಂಜೆ 4.00ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು,ಎಲಿಟ ಪ್ರೋಮೆನೇಡ್ ಅಪಾರ್ಟ್ಮೆಂಟ್, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಅಲ್ಲದೇ ಅರೇಹಳ್ಳಿ, ಇಟ್ಟಮಡು, ಏಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ನಲ್ಲೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
KPTCL ನಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. 220/66/11 kV GIS ಬೃಂದಾವನ ಸಬ್ಸ್ಟೇಷನ್, ಪೀಣ್ಯ ವಿಭಾಗದ N-4 ಉಪ ವಿಭಾಗ, 66/11 kv RMV ಸಬ್ಸ್ಟೇಷನ್ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗ, 220/66/11 kV ಎಸ್ಆರ್ಎಸ್ ಪೀಣ್ಯ ಸಬ್ಸ್ಟೇಷನ್ ಮತ್ತು ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಕಾಮಗಾರಿ ಹಿನ್ನೆಲೆ ಕರೆಂಟ್ ಇರೋದಿಲ್ಲ.