ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂ. 26 ರಿಂದ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು| ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ಬಳಿ ಕಿಡಿಗೇಡಿಗಳ ಗೂಂಡಾವರ್ತನೆ!
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕಳೆದ ಎರಡು ದಿನಗಳಿಂದ ರಾಜ್ಯದ ಬಹುತೇಕ ಕಡೆ ಒಣಹವೆ ಇತ್ತು. ಆದರೆ ಇಂದಿನಿಂದ ಮಳೆ ಚುರುಕುಗೊಳ್ಳಲಿದ್ದು, ಜೂನ್ 26ರ ಬಳಿಕ ತೀರಾ ಹೆಚ್ಚಾಗುವ ನಿರೀಕ್ಷೆ ಇದೆ. ಎಚ್ಎಎಲ್ನಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.