ಮಂಡ್ಯ:- ಕೆಆರ್ಎಸ್ ಹೊಸ ದಾಖಲೆ ಬರೆಯೋಕೆ ಸಿದ್ಧವಾಗುತ್ತಿದೆ. ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ.
ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಇಂದು ಹೈಕೋರ್ಟ್ ನಲ್ಲಿ PIL ಅರ್ಜಿ ವಿಚಾರಣೆ!
ಈಗಾಗಲೇ ಕೆಆರ್ಎಸ್ ಡ್ಯಾಂ 119.40 ಅಡಿ ತುಂಬಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ನಲ್ಲಿ ಇಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ.
ಜಲಾಶಯದ ನಿರ್ಮಾಣವಾದಾಗಿನಿಂದ ಮೊದಲ ಬಾರಿಗೆ ಜೂನ್ನಲ್ಲಿ ಇಷ್ಟೊಂದು ನೀರು ಸಂಗ್ರಹವಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಸಾಮಾನ್ಯವಾಗಿ ಜುಲೈ ಅಂತ್ಯ ಅಥವಾ ಆಗಸ್ಟ್ನಲ್ಲಿ ಡ್ಯಾಂ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಕೆಆರ್ಎಸ್ ಡ್ಯಾಂ 119.40 ಅಡಿ ಭರ್ತಿಯಾಗಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕನ್ನಂಬಾಡಿಯ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ.