ಬೆಂಗಳೂರು:- ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಪ್ರಕಾಶ್ ರಿಗೆ ಸಂಬಂಧಪಟ್ಟಂತೆ ದಾಳಿ ನಡೆದಿದ್ದು,
ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ FIR
ಕಚೇರಿ,ಮನೆ ಸೇರಿದಂತೆ ನಗರದ ಒಟ್ಟು ಐದು ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲಿಸಲಾಗುತ್ತಿದೆ. ಗೋವಿಂದರಾಜನಗರ ವಿಭಾಗದ ಎಕ್ಸಿಕ್ಯೂಟಿವ್ ಎಂಜಿನಿಯರ್ ಪ್ರಕಾಶ್ ಅವರ ನಾಗರಬಾವಿ, ಗೋವಿಂದರಾಜನಗರ,ಯಲಹಂಕ ಭಾಗಗಳಲ್ಲಿರುವ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲಿಸಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಸಿದ ಆರೋಪದಲ್ಲಿ, ದಾಳಿ ನಡೆಸಿದ ಅಧಿಕಾರಿಗಳು, ಪರಿಶೀಲನೆಯಲ್ಲಿ ತೊಡಗಿದ್ದಾರೆ.