ಹಾಸನ:- ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ಧಾರಕಾರ ಮಳೆ ಶುರುವಾಗಿದೆ. ಹೀಗಾಗಿ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಅಂಗನವಾಡಿ ಮತ್ತು ಎಲ್ಲಾ ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಮಾಡಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಇನ್ನೂ ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 24 ರಂದು 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಚಿಕ್ಕೋಡಿ ಉಪವಿಭಾಗದಲ್ಲಿ ಮಳೆ ಮುಂದುವರೆದಿದೆ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಹರಿದು ಬರುತ್ತಿದೆ. ವೇದಗಂಗಾ, ದೂಧಗಂಗಾ ನದಿಗಳಲ್ಲೂ ನೀರಿನ ಮಟ್ಟ ಏರುತ್ತಿದೆ. ಕಾರವಾರ ಜಿಲ್ಲೆಯಲ್ಲಿ ಗಾಳಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಹಾಸನದಲ್ಲಿ ಮಳೆ ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಲಾಗಿದೆ.