Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕತಾರಿನಲ್ಲಿ ಹಣ್ಣಿನ ರಾಜನ ಹಿರಿಮೆ ನೀಡ ಬನ್ನಿ ಇದರ ಸೊಬಗು

    By Author AINJune 24, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ: ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°C ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ. ಎರಡನೇ ಬಾರಿ ಆಯೋಜಿಸುತ್ತಿರುವ ಮಾವಿನ ಹಾಂಬಾ ಪ್ರದರ್ಶನ ಇದಾಗಿದೆ.
    50ಕ್ಕೂ ಹೆಚ್ಚು ಅಂಗಡಿಗಳು, ಸುಮಾರು 25 ಮಾರಾಟಗಾರರು, ಎರಡು ವಾರದ ಸಂತೆ ಎಂದೇ ಹೇಳಬಹುದು. ಪ್ರತಿದಿನಕ್ಕೆ ಸಾವಿರಾರು ಜನರು ಬಂದು ಆನಂದಿಸಿ, ಸ್ವಾದಿಸಿ, ಹೋಗುತ್ತಿರುವರು. ಇದೇ ಕತಾರಿನ ದೋಹದಲ್ಲಿರುವ ಸೂಕ್ ವಾಕಿಫ್ ನಲ್ಲಿ ನಡೆದ ಮಾವಿನ ಮೇಳ.

    ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ?

    ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜೊತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್ ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ ಮತ್ತು ಪಾನಿಯಗಳು ಎಲ್ಲರ ಇಂದ್ರಿಯಗಳನ್ನು ಆಕರ್ಷಿಸಿತು.

    ಒಂದೆಡೆ ಸುಪ್ರಸಿದ್ಧ ವಾಣಿಜ್ಯ ಮಳಿಗೆಗಳ ಸಾಲಾಗಿ ಇದ್ದರೆ ಇನ್ನೊಂದೆಡೆ ಪ್ರಸಿದ್ಧ ಉಪಹಾರ ಕೇಂದ್ರಗಳ ಅಂಗಡಿ ಮುಂಗಟ್ಟುಗಳು ಇದ್ದವು, ಮತ್ತೊಂದೆಡೆ ನೇರ ಮಾರಾಟಗಾರರ (ಹೋಲ್ಸೇಲ್) ಮಳಿಗೆಗಳು ಇದ್ದವು. ಭಾರತ , ಕತಾರ್ , ಶ್ರೀಲಂಕಾ , ಬಾಂಗ್ಲಾದೇಶ, ಫಿಲಿಪಿನ್ಸ್ ಇನ್ನೂ ಹಲವು ದೇಶದ ಜನರು ಬಂದು ಈ ಮಾವಿನ ಮೇಳದಲ್ಲಿ ಹಣ್ಣಿನ ಯಾವುದಾದರೂ ಒಂದು ರುಚಿಯನ್ನು ಸೇವಿಸಿ ಹೋಗಿರುವರು.

    ನಿಜವಾಗಲೂ ಅದ್ಭುತ ದೃಶ್ಯವಲ್ಲವೇ? ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಕೇರಳ, ಮಧ್ಯಪ್ರದೇಶ, ಗೋವಾ ಇನ್ನಿತರ ರಾಜ್ಯಗಳಿಂದ ಆಮದು ತರಿಸಿದ ಮಾವಿನ ಹಣ್ಣುಗಳು. ಕತರಿನ ಭಾರತೀಯ ದೂತಾವಾಸದ ನೇತೃತ್ವದಲ್ಲಿ ಐಬಿಪಿಸಿ (ಭಾರತೀಯ ವ್ಯವಹಾರ ಹಾಗೂ ವೃತ್ತಿ ನಿರತ ಮಂಡಳಿಯ) ಸಹಯೋಗದೊಂದಿಗೆ ಏರ್ಪಡಿಸಿದ್ದ ಎರಡು ವಾರಗಳ ಮಾವಿನ ಮೇಳವು, ದಿನಾಂಕ 12 ಜೂನ್ 2025ರಂದು ಪ್ರಾರಂಭವಾಗಿ 21 ಜೂನ್ 2025ರಂದು ಸಂಪನ್ನಗೊಂಡಿತು. ನಿಜಕ್ಕೂ ಅದ್ದೂರಿ ಯಶಸ್ಸು ಕಂಡದ್ದು ಹಣ್ಣಿನ ರಾಜನೆ!

    Demo
    Share. Facebook Twitter LinkedIn Email WhatsApp

    Related Posts

    ತಾವೇ ಬಿತ್ತನೆ ಮಾಡಿದ ಬೆಳೆ ತಾವೇ ನಾಶ ಮಾಡುತ್ತಿರುವ ಅನ್ನದಾತರು

    June 24, 2025

    ನೇಣಿಗೆ ಶರಣಾದ ಗೃಹಿಣಿ: ಗಂಡನ ಮೇಲೆ ಕೊಲೆ ಆರೋಪ- ಪೊಲೀಸರಿಗೆ ಶರಣಾದ ವಕೀಲ!

    June 24, 2025

    ಬೆಳ್ಳಂ ಬೆಳಗ್ಗೆ ‘ಲೋಕಾ’ ರೇಡ್: ಕರ್ನಾಟಕದ ಹಲವೆಡೆ ದಾಳಿ, ಪರಿಶೀಲನೆ!

    June 24, 2025

    ಹಾಸನದಲ್ಲಿ ಧಾರಕಾರ ಮಳೆ: ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಘೋಷಿಸಿದ ಜಿಲ್ಲಾಧಿಕಾರಿ!

    June 24, 2025

    ಬೆಲೆ ಕುಸಿತ: ಕೋಲಾರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಬೆಳೆಗಾರರ ಪ್ರತಿಭಟನೆ!

    June 24, 2025

    ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ FIR

    June 24, 2025

    ಕೊಡಗು: ಕೃಷಿಕರ ಗಮನ ಸೆಳೆದ ಬಟರ್ ಫ್ರೂಟ್ ಹಣ್ಣಿನ ವೈವಿಧ್ಯತೆ ಮೇಳ!

    June 24, 2025

    ಮಂಡ್ಯ: ಬಾಲಕಿ ಎಳೆದೊಯ್ದಿದ್ದ ಮೈಕ್ರೋ ಸಿಬ್ಬಂದಿ ಅರೆಸ್ಟ್!

    June 24, 2025

    KRS ಜಲಾಶಯಕ್ಕೆ ಭಾರೀ ನೀರು: ಡ್ಯಾಂ ಗೇಟ್‌ ತೆರದು ಕಾವೇರಿ ನದಿಗೆ ನೀರು ಬಿಡುಗಡೆ ಸಾಧ್ಯತೆ!

    June 23, 2025

    ಗೋಡೌನ್ ನಲ್ಲಿ ದಾಸ್ತಾನು ಮಾಡಲಾಗಿದ್ದ ಪಿಓಪಿ ಗಣಪತಿಗಳು ಸೀಜ್!

    June 23, 2025

    ಅಮೇರಿಕಾವು ಇರಾನ್ ಮೇಲೆ ದಾಳಿ ಮಾಡಿದ್ದು ತಪ್ಪು : ಮಲ್ಲಿಕಾರ್ಜುನ ಖರ್ಗೆ!

    June 23, 2025

    ಕೊಡಗಿನಲ್ಲಿ ಭಾರೀ ಮಳೆ: ಬೆಂಗೂರು ದೋಣಿಕಾಡು ಮತ್ತೆ ಮುಳುಗಡೆ..ದೋಣಿಯಲ್ಲಿ ಓಡಾಟ!

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.