ಗದಗ: ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಪಲ್ಟಿ ಹೊಡೆದು ರಸ್ತೆ ಪಕ್ಕಕ್ಕೆ ಉರುಳಿ ಬೈಕ್ ಸವಾರರು ಹಾಗೂ ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ನಡೆದಿದೆ.
ಕೊಪ್ಪಳದಿಂದ ಗದಗ ಕಡೆ ತೆರಳುತ್ತಿದ್ದ ಕಾರು ಹಾಗೂ ಗದಗದಿಂದ ಲಕ್ಕುಂಡಿ ಗ್ರಾಮದ ಕಡೆ ಹೊರಟಿದ್ದ ಬೈಕ್ ಸವಾರ ಹೆದ್ದಾರಿ ಕ್ರಾಸ್ ಮಾಡುವಾಗ ಅಪಘಾತ ನಡೆದಿದೆ.
ಬೆಳಗ್ಗೆ ಎದ್ದ ಕೂಡಲೇ ತಲೆನೋವು ಬರುತ್ತಾ!? ಹಾಗಿದ್ರೆ ರಾತ್ರಿ ಮಾಡುವ ಈ ತಪ್ಪು ಕಾರಣ!
ಅಪಘಾತದ ರಭಸಕ್ಕೆ ಕಾರು ಪಲ್ಟಿ ಹೊಡೆದು ರಸ್ತೆ ಪಕ್ಕಕ್ಕೆ ಉರುಳಿದೆ. ಇನ್ನೂ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.