Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಷ್ಟ್ರಪತಿ ಭೇಟಿ ವೇಳೆ ಏಳು ಬಿಲ್ಲುಗಳನ್ನು ಅನುಮೋದಿಸಲು ಮನವಿ: ಸಿಎಂ ಸಿದ್ದರಾಮಯ್ಯ!

    By AIN AuthorJune 25, 2025
    Share
    Facebook Twitter LinkedIn Pinterest Email
    Demo

    ನವದೆಹಲಿ: ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ  ಏಳು ಬಿಲ್ಲುಗಳನ್ನು  ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಚರ್ಚಿಸಲಾಗಿದೆ. ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಅವರು  ತಿಳಿಸಿದ್ದು, ಅವುಗಳನ್ನು  ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ!

    ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ,  ವಾರದ ಹಿಂದೆ 16 ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14 ನೇ ಹಣಕಾಸು ಆಯೋಗದಲ್ಲಿ 4.7% ಅಡ್ಡವಾಗಿ  ತೆರಿಗೆ ಹಂಚಿಕೆಯಾಗಿತ್ತು. 15 ನೇ ಹಣಕಾಸು ಆಯೋಗದಲ್ಲಿ  3.6% ಆಗಿದೆ. ಶೇಕಡಾ  1.1% ಕಡಿಮೆಯಾಗಿದ್ದು, ಇದು ಒಟ್ಟಾರೆ  ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು 80000 ಕೋಟಿ ಕಡಿಮೆಯಾಗಿದೆ ಎಂದರು.

    *ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ*

    ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ  63 ಸಾವಿರ ಕೋಟಿ,  ಅನ್ಯಾಯವಾಗಿದೆ. ರಾಜ್ಯಕ್ಕೆ  ವಿಶೇಷ ಅನುದಾನ 5495 ಕೋಟಿ ಮೀಸಲಿಡಿಲಾಗಿತ್ತು. ಪೆರಿಫೆರಲ್ ರಿಂಗ್ ರೋಡ್ ಗೆ 3000 ಕೋಟಿ,  ಬೆಂಗಳೂರಿನ ಕೆರೆಗಳ ಅಭಿವೃದ್ಧಿಗಾಗಿ 3000ಕೋಟಿ ಸೇರಿದಂತೆ  ಒಟ್ಟು 11495 ಕೋಟಿ ಅನುದಾನ ಘೋಷಣೆ ಮಾಡಲಾಗಿತ್ತು. ಒಟ್ಟಾರೆಯಾಗಿ 80000 ಕೋಟಿ  ನಮಗೆ ಕಡಿಮೆಯಾಗಿದೆ. ಇದು ಬಹಳ  ದೊಡ್ಡ ಮೊತ್ತವಾಗಿದೆ ಎಂಡ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    *ರಾಜ್ಯ ದೇಶದ  ಆರ್ಥಿಕ  ಬೆಳವಣಿಗೆಗೆ ಹೆಚ್ಚಿನ  ಕೊಡುಗೆ ನೀಡುತ್ತಿದೆ*
    ದೇಶದ  ಜನಸಂಖ್ಯೆಯಲ್ಲಿ ಕರ್ನಾಟಕದ ಜನಸಂಖ್ಯೆ  5% ರಷ್ಟಿದೆ. ಕರ್ನಾಟಕ  8.7% ಜಿಡಿಪಿಗೆ ಕೊಡುಗೆ ನೀಡುತ್ತಿದ್ದೇವೆ. 2011-12ರಲ್ಲಿ  7.6% ಇದ್ದದ್ದು, ಈಗ 8.7% ಕೊಡುಗೆ ನೀಡುತ್ತಿದೆ. ದೇಶಕ್ಕೆ ಜಿಎಸ್ ಟಿ ಕೊಡುಗೆ ನೀಡುವುದರಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಜಿ.ಡಿ. ಪಿ ನಲ್ಲಿ ನಮ್ಮ ರಾಜ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ.  ಹಾಗಾಗಿ ಯಾವ ರಾಜ್ಯ ಹೆಚ್ಚು ಆರ್ಥಿಕ  ಬೆಳವಣಿಗೆಗೆ ಕೊಡುಗೆ ನೀಡುತ್ತಿದೆ ಎನ್ನುವುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೋರಲಾಗಿದೆ ಎಂದರು.

    *ಹಣಕಾಸಿನ ಕಾರ್ಯಕ್ಷಮತೆ ತೋರದ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನ-ಕೇಂದ್ರದ ಕ್ರಮ ಸರಿಯಿಲ್ಲ*

    ತಲಾವಾರು ಆದಾಯವನ್ನು ಪರಿಗಣಿಸುವ ಮಾನದಂಡವನ್ನು ಶೇ.45 ರಿಂದ ಶೇ. 20 ಕ್ಕೆ ಇಳಿಸಬೇಕೆಂದು ಕೋರಲಾಗಿದೆ. ಕೇರಳ, ಆಂಧ್ರ, ತಮಿಳುನಾಡು ರಾಜ್ಯಗಳಿಗೆ ನೀಡಿದಂತೆ ಆದಾಯ ಕೊರತೆ ಅನುದಾನವನ್ನು ಕರ್ನಾಟಕಕ್ಕೂ ನೀಡಬೇಕು. ಇಲ್ಲವೇ  ಯಾವುದೇ ರಾಜ್ಯಗಳಿಗೆ ನೀಡಬಾರದು. ರಾಜಸ್ವ ಹೆಚ್ಚಳದಲ್ಲಿ ಖರ್ಚಿಗಿಂತ ಆದಾಯ ಹೆಚ್ಚಿದ್ದು, ವಿತ್ತೀಯ ಕೊರತೆಯಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚಿರುತ್ತದೆ. ರಾಜಸ್ವ ಹೆಚ್ಚಳದಲ್ಲಿದ್ದ ಕರ್ನಾಟಕ ಕಳೆದ ವರ್ಷದಿಂದ ವಿತ್ತೀಯ ಕೊರತೆ ಎದುರಿಸುತ್ತಿದ್ದು, ಮುಂದಿನ ವರ್ಷಕ್ಕೆ ಈ ಪರಿಸ್ಥಿತಿ ಸುಧಾರಿಸಲಿದೆ. ನಿರಂತರವಾಗಿ ವಿತ್ತೀಯ ಕೊರತೆಯಲ್ಲಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ಹು ನೀಡಲಾಗುತ್ತದೆ. ಹಣಕಾಸಿನ ಕಾರ್ಯಕ್ಷಮತೆ ತೋರದಿರುವ ರಾಜ್ಯಗಳಿಗೆ ವಿತ್ತೀಯ ಕೊರತೆ ಅನುದಾನವನ್ನು ನೀಡುತ್ತಿರುವ ಕೇಂದ್ರದ ಕ್ರಮ ಸರಿಯಾದುದಲ್ಲ ಎಂದರು.

    *ವಿಶೇಷ ಅನುದಾನಕ್ಕೆ ಮನವಿ*

    ಬೆಂಗಳೂರು ಜಾಗತಿಕ ನಗರವಾಗಿದ್ದು,  ನಗರದ ಬಂಡವಾಳ ಕಾರ್ಯಗಳಿಗೆ 1.15 ಲಕ್ಷ ಕೋಟಿ ಬೇಕಾಗಿದ್ದು, ಇದಕ್ಕಾಗಿ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ.  ಮಲೆನಾಡು ಮತ್ತು ಪಶ್ಚಿಮ ಘಟ್ಟಗಳ ಪ್ರದೇಶಗಳಲ್ಲಿ ಪ್ರವಾಹದಿಂದಾಗುವ ಅನಾಹುತಗಳನ್ನು ನಿಭಾಯಿಸಲು ವಿಶೇಷ ಅನುದಾನ, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ.

    *ರಾಜ್ಯದ ಮನವಿಯನ್ನು ಪರಿಶೀಲಿಸುವ ಕೇಂದ್ರ ವಿತ್ತಸಚಿವರ ಭರವಸೆ*

    ರಾಜ್ಯದ ಮನವಿಗೆ ಕೇಂದ್ರ ವಿತ್ತ ಸಚಿವರು ಸ್ಪಂದಿಸಿದರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಲಾಗಿದೆಯೇ ಹೊರತು ಆರೋಪ ಮಾಡಿಲ್ಲ. ರಾಜ್ಯಕ್ಕೆ ಅನ್ಯಾಯವಾಗಿದ್ದರೆ, ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಕೇಂದ್ರ ವಿತ್ತಸಚಿವರು ನೀಡಿರುವುದಾಗಿ ತಿಳಿಸಿದರು.

    Demo
    Share. Facebook Twitter LinkedIn Email WhatsApp

    Related Posts

    Post Office Scheme: ಸಣ್ಣ ಉಳಿತಾಯ.. ದೊಡ್ಡ ಲಾಭ: ನಿಮ್ಮನ್ನು ಕೋಟ್ಯಾಧಿಪತಿಯನ್ನಾಗಿ ಮಾಡುತ್ತೆ ಈ ಪೋಸ್ಟ್ ಆಫೀಸ್ ಸ್ಕೀಮ್..!

    June 25, 2025

    ಎಂದಿಗೂ ಭಾರತ ಸರ್ವಾಧಿಕಾರ ಸ್ವೀಕರಿಸಲ್ಲ: ಕೇಂದ್ರ ಸಚಿವ ಅಮಿತ್ ಶಾ!

    June 24, 2025

    ಭಾರತೀಯರ ರಕ್ತ ಚೆಲ್ಲುವ ಭಯೋತ್ಪಾದಕರ ನೆಲೆಗಳು ಎಲ್ಲಿಯೂ ಸುರಕ್ಷಿತವಾಗಿಲ್ಲ: ಪ್ರಧಾನಿ ಮೋದಿ

    June 24, 2025

    ನಂದಿನಿ ತುಪ್ಪಕ್ಕೆ ಭಾರೀ ಡಿಮ್ಯಾಂಡ್: 10 ಲಕ್ಷ ಕೆ.ಜಿ ತುಪ್ಪ ಪೂರೈಸುವಂತೆ TTD ಮನವಿ

    June 24, 2025

    Gautam Adani: ಭಾರತಕ್ಕೆ ಶಾಂತಿಯ ಮೌಲ್ಯ ತಿಳಿದಿದೆ: ಆಪರೇಷನ್ ಸಿಂಧೂರ್ ಬಗ್ಗೆ ಗೌತಮ್ ಅದಾನಿ ಹೇಳಿದ್ದೇನು..?

    June 24, 2025

    No Petrol: ಹೊಸ ತಂತ್ರಜ್ಞಾನ: ಜುಲೈ 1 ರಿಂದ ಈ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಬ್ಯಾನ್..!

    June 24, 2025

    ಆಪರೇಷನ್ ಸಿಂಧು: ಇಸ್ರೇಲ್’ನಿಂದ ದೆಹಲಿಗೆ 161 ಭಾರತೀಯರ ಆಗಮನ

    June 24, 2025

    ದಾಳಿ-ಪ್ರತಿದಾಳಿ: ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ.. ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ!

    June 24, 2025

    ಹಿಂದಿಯ ಖ್ಯಾತ ಸೀರಿಯಲ್ ಶೂಟಿಂಗ್ ಸೆಟ್ ನಲ್ಲಿ ಭೀಕರ ಬೆಂಕಿ ಅವಘಡ: ಅರ್ಧಕ್ಕೆ ನಿಲ್ಲುತ್ತಾ ಧಾರವಾಹಿ?

    June 23, 2025

    ಜಮ್ಮುವಿನಲ್ಲಿ ಲ್ಯಾಂಡ್ ಆಗದೆ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್..! ಯಾಕೆ ಗೊತ್ತಾ..?

    June 23, 2025

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025

    PM Kisan 20th Installment: ಈ ದಿನವೇ ನಿಮ್ಮ ಖಾತೆ ಸೇರಲಿದೆ 2000 ರೂಪಾಯಿ..! ಇಲ್ಲಿದೆ ಡಿಟೈಲ್ಸ್

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.