ನವದೆಹಲಿ:- ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಕಾಂಗ್ರೆಸ್ ಸಂಸದ ಶಶಿ ತರೂರ್ಗೆ ಟಾಂಗ್ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ದೇಶ ಮೊದಲು, ಪಕ್ಷ ನಂತರ ಎಂದು ನಾವು ಹೇಳಿದ್ದೇವೆ. ಕೆಲವು ಜನರು ‘ಮೋದಿ ಮೊದಲು, ದೇಶ ನಂತರ’ ಎಂದು ಭಾವಿಸುತ್ತಾರೆ ಎಂದರು.
ನಿತ್ಯ ಖಾಲಿ ಹೊಟ್ಟೆಯಲ್ಲಿ ಟೊಮೆಟೋ ಜ್ಯೂಸ್ ಕುಡಿಯೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಇದೆ ಗೊತ್ತಾ?
ಪ್ರಧಾನಿ ನರೇಂದ್ರ ಮೋದಿ ಹೊಗಳಿ ಇತ್ತಿಚೇಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಬರೆದ ಲೇಖನದ ಬಗ್ಗೆ ಮಾತನಾಡಿದ ಅವರು, ಶಶಿ ತರೂರ್ ಇಂಗ್ಲಿಷ್ನಲ್ಲಿ ತುಂಬಾ ನಿರರ್ಗಳವಾಗಿ ಮಾತನಾಡುತ್ತಾರೆ. ನನಗೆ ಇಂಗ್ಲಿಷ್ ಚೆನ್ನಾಗಿ ಓದಲು ಬರುವುದಿಲ್ಲ, ಅವರ ಭಾಷೆ ತುಂಬಾ ಚೆನ್ನಾಗಿದೆ. ಅದಕ್ಕಾಗಿಯೇ ನಾವು ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಮಾಡಿದ್ದೇವೆ ಎಂದು ಹೇಳಿದರು. 26 ನಾಗರಿಕರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿದ ಖರ್ಗೆ, ಸಶಸ್ತ್ರ ಪಡೆಗಳಿಗೆ ಬೆಂಬಲ ನೀಡುವಲ್ಲಿ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ನಿಂತಿವೆ ಎಂದು ಹೇಳಿದರು.
ದೇಶದಲ್ಲಿ ಈಗ ಅಘೋಷಿತ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ನಮ್ಮ ‘ಸಂವಿಧಾನ ಬಚಾವೋ ಯಾತ್ರೆ’ಯಿಂದ ದಿಕ್ಕೆಟ್ಟಿದ್ದ ಬಿಜೆಪಿ 50 ವರ್ಷಗಳ ಹಿಂದಿನ ತುರ್ತುಪರಿಸ್ಥಿತಿಯ ಬಗ್ಗೆ ಮಾತನಾಡತೊಡಗಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಹೆಚ್ಚಿನದನ್ನು ಮಾಡಲು ಸಾಧ್ಯವಾಗದವರೂ ನಿರುದ್ಯೋಗ, ಹಣದುಬ್ಬರ, ನೋಟು ಅಮಾನ್ಯೀಕರಣದಂತಹ ಸಮಸ್ಯೆಗಳ ಬಗ್ಗೆ ಉತ್ತರ ನೀಡಲಾಗದವರು ತಮ್ಮ ವೈಫಲ್ಯಗಳನ್ನು ಮುಚ್ಚಿಡಲು ಹಾಗೂ ಪದೇ ಪದೇ ಸುಳ್ಳುಗಳನ್ನು ಹೇಳಿ ‘ಸಂವಿಧಾನ ಹತ್ಯಾ ದಿವಸ್’ ಅಂತಾ ಆಚರಿಸುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
ಇನ್ನೂ ಮೋದಿ ಸರ್ಕಾರದಿಂದ ಭಯೋತ್ಪಾದನೆ ವಿರುದ್ಧ ಭಾರತದ ನಿಲುವನ್ನು ಬೇರೆ ದೇಶಗಳಿಗೆ ತಿಳಿಸಲು ಸಂಸದರ ನಿಯೋಗ ರಚಿಸಲಾಗಿತ್ತು. ಆ ನಿಯೋಗಗಳಲ್ಲಿ ಒಂದರ ನೇತೃತ್ವ ವಹಿಸಲು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರನ್ನು ಆಯ್ಕೆ ಮಾಡಿದ ನಂತರ ಶಶಿ ತರೂರ್ ಮತ್ತು ಕಾಂಗ್ರೆಸ್ ನಡುವೆ ಶೀತಲ ಸಮರ ಹೆಚ್ಚಾಗಿದೆ. ವಿದೇಶದಿಂದ ಬಂದ ನಂತರವೂ ಶಶಿ ತರೂರ್ ಪ್ರಧಾನಿ ಮೋದಿಯನ್ನು ಹೊಗಳುತ್ತಿರುವುದಕ್ಕೆ ಕಾಂಗ್ರೆಸ್ ಅಸಮಾಧಾನಗೊಂಡಿದ್ದು, ಅದು ಆಗಾಗ ಬಹಿರಂಗವಾಗಿಯೇ ವ್ಯಕ್ತವಾಗುತ್ತಿದೆ. ಇದೀಗ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಶಶಿ ತರೂರ್ಗೆ ಟಾಂಗ್ ನೀಡಿದ್ದಾರೆ.